ಮೇಕೆದಾಟು ಅನುಷ್ಠಾನವಾಗದಿದ್ದರೆ ಪ್ರತಿಭಟನೆ: ಪಿ.ಎಂ. ರವಿಕುಮಾರ್ ಎಚ್ಚರಿಕೆ

25 bidadi photo 1
Published on

ಬಿಡದಿ :  ಮೇಕೆದಾಟು ಯೋಜನೆ ಅನುಷ್ಠಾನಗೊಳಿಸದಿದ್ದರೆ ಜಿಲ್ಲಾ ಕೇಂದ್ರದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ರೈತ ಸಂಘ (ರಿ) ರೈತ ಬಣದ ರಾಜ್ಯ ಉಪಾಧ್ಯಕ್ಷ ಪಿ.ಎಂ. ರವಿಕುಮಾರ್ ಎಚ್ಚರಿಸಿದರು.

ಪಟ್ಟಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯ ರೈತ ಸಂಘ (ರಿ) ರೈತ ಬಣದ ಜಿಲ್ಲಾ ಘಟಕದ ನೂತನ ಕಾರ್ಯಾಲಯ ಉದ್ಘಾಟನೆ ಮತ್ತು ಸನ್ಮಾನ ಸಮಾರಂಭದಲ್ಲಿ ಮಾತನಾಡಿ, ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಸರ್ಕಾರ ಮೀನಮೇಷ ಎಣಿಸುವ ಬದಲು, ದಿಟ್ಟ ನಿರ್ಧಾರ ಕೈಗೊಳ್ಳಬೇಕು ಎಂದರು.

ಕೃಷಿಯನ್ನೇ ನಂಬಿರುವ ರೈತರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಆದರೆ ಸರ್ಕಾರ ಪರಿಹಾರ ಕಾರ್ಯಕ್ಕೆ ಮುಂದಾಗುತ್ತಿಲ್ಲ. ರೈತ ಸಂಘಟನೆಗಳು ಸರ್ಕಾರವನ್ನು ಎಚ್ಚರಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿವೆ ಎಂದರು.

ಬಿಡದಿಯಲ್ಲಿ ಜಿಲ್ಲಾ ಕಾರ್ಯಾಲಯ ತೆರೆದಿರುವುದು ಉತ್ತಮ ಕಾರ್ಯವಾಗಿದ್ದು, ಪದಾಧಿಕಾರಿಗಳು ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುವ ಕೆಲಸ ಮಾಡಿ, ಸಂಘಟನೆಯನ್ನು ಕ್ರಿಯಾಶೀಲವಾಗಿಸುವ ನಿಟ್ಟಿನಲ್ಲಿ ಕೆಲಸ ಮಾಡಿ ಎಂದು ಶುಭ ಹಾರೈಸಿದರು.

ಮಾಗಡಿ ಶಾಸಕ ಎ.ಮಂಜುನಾಥ್, ಮಾಜಿ ಶಾಸಕ ಎಚ್.ಸಿ.ಬಾಲಕೃಷ್ಣ, ಎಂಎಲ್‌ಸಿ ಸಿ.ಎಂ. ಲಿಂಗಪ್ಪ ಹಾಗೂ ಜಿಲ್ಲೆಯ ಹಲವು ಪ್ರಮುಖರು ಭಾಗವಹಿಸಿದ್ದರು.

ಕರ್ನಾಟಕ ರಾಜ್ಯ ರೈತ ಸಂಘ (ರಿ) ರೈತ ಬಣದ ರಾಜ್ಯ ಉಪಾಧ್ಯಕ್ಷರಾಗಿ ನೇಮಕಗೊಂಡ ಪಿ.ಎಂ. ರವಿಕುಮಾರ್ ಅವರನ್ನು ಸನ್ಮಾನಿಸಲಾಯಿತು. ಪ್ರಧಾನ ಕಾರ್ಯದರ್ಶಿ ಶಿವರಾಜು, ಜಿಲ್ಲಾ ಗೌರವಾಧ್ಯಕ್ಷರಾದ ನಾಗೇಶ್, ರಾಜಶೇಖರ್, ಮಹಿಳಾ ಘಟಕದ ಜಿಲ್ಲಾದ್ಯಕ್ಷೆ ಗೀತಾಸ್ವಾಮಿ, ಉಪಾಧ್ಯಕ್ಷೆ ಯಶೋದಮ್ಮ, ತಾಲೂಕು ಘಟಕದ ಅಧ್ಯಕ್ಷರುಗಳಾದ ಕೇಶವಮೂರ್ತಿ, ಶಿವಣ್ಣ.ಬಿ, ಕೆಂಚೇಗೌಡ, ವೆಂಕಟೇಶ್ ಮತ್ತಿತರರು ಇದ್ದರು.

ವಿದ್ಯುತ್ ಇಲಾಖೆ ಖಾಸಗೀರಣ ಮತ್ತು ಕೃಷಿ ಪಂಪ್ ಸೆಟ್‌ಗಳಿಗೆ ಮೀಟರ್ ಅಳವಡಿಸಲು ಮುಂದಾಗಿರುವ ಸರ್ಕಾರದ ನಡೆ ರೈತ ವಿರೋಧಿ ನೀತಿಗಳಾಗಿವೆ. ಸರ್ಕಾರ ಈ ಅಸಮರ್ಪಕ ಯೋಜನೆಗಳನ್ನು ಕೈ ಬಿಟ್ಟು, ಇನ್ನಷ್ಟು ರೈತಪರ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ಮುಂದಾಗಬೇಕು. ಇ.ಎನ್. ಕೃಷ್ಣೇಗೌಡ, ರಾಜ್ಯಾಧ್ಯಕ್ಷ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net