ಮೈಕ್ರೋ ಫೈನಾನ್ಸ್ ವಿರುದ್ಧ ಕ್ರಮಕ್ಕೆ ಒತ್ತಾಯ

11sgr1 finance
ಮೈಕ್ರೋ ಫೈನಾನ್ಸ್ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟದ ಅಶ್ರಯದಲ್ಲಿ ಸಾಗರದಲ್ಲಿ ಎಸಿಗೆ ಮನವಿ ಸಲ್ಲಿಸಲಾಯಿತು. ಸುಂದರ ಸಿಂಗ್, ಎನ್.ಡಿ.ವಸಂತಕುಮಾರ್, ರವಿಕುಗ್ವೆ, ಪರಮೇಶ್ವರ ದೂಗೂರು, ಎಚ್.ಬಿ.ರಾಘವೇಂದ್ರ ಇತರರಿದ್ದರು.
Published on

ಸಾಗರ: ರಾಜ್ಯದಲ್ಲಿ ಮೈಕ್ರೋ ೈನಾನ್ಸ್ ನಿಯಂತ್ರಿಸುವ ಕಾಯ್ದೆಗೆ ಸುಗ್ರಿವಾಜ್ಞೆಗೆ ರಾಜ್ಯಪಾಲರು ಅಂಕಿತ ಹಾಕುವಂತೆ ಒತ್ತಾಯಿಸಿ ಮಂಗಳವಾರ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟದ ಅಶ್ರಯದಲ್ಲಿ ಉಪವಿಭಾಗಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಿವಾನಂದ ಕುಗ್ವೆ ಮಾತನಾಡಿ, ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಹಾವಳಿ ಹೆಚ್ಚುತ್ತಿದ್ದು ಬಡವರ ಮೇಲಿನ ಆರ್ಥಿಕ ಶೋಷಣೆ ಮಿತಿಮೀರಿದೆ. ಜನಸಾಮಾನ್ಯರು ಆರೋಗ್ಯ ಸಮಸ್ಯೆ, ಮದುವೆ ಇನ್ನಿತರ ಕಾರ್ಯಗಳಿಗೆ ಮೈಕ್ರೋ ಫೈನಾನ್ಸ್‌ನಿಂದ ಸಾಲ ಪಡೆದಿರುತ್ತಾರೆ. ಆದರೆ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಸಾಲ ವಸೂಲಿ ಮಾಡುವ ಸಮಯದಲ್ಲಿ ಗೂಂಡಾಗಳಂತೆ ವರ್ತಿಸುತ್ತಿದ್ದಾರೆ. ಈ ಶೋಷಣೆ ನಿಲ್ಲಬೇಕಾದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಜಾರಿಗೆ ತಂದಿರುವ ಮೈಕ್ರೋ ಫೈನಾನ್ಸ್ ನಿಯಂತ್ರಿಸುವ ಕಾಯ್ದೆಗೆ ರಾಜ್ಯಪಾಲರು ಅಂಕಿತ ಹಾಕಬೇಕು ಎಂದು ಒತ್ತಾಯಿಸಿದರು. ದಲಿತ ಮುಖಂಡ ಎಲ್.ಚಂದ್ರಪ್ಪ ಮಾತನಾಡಿ, ಎಲ್ಲಿಯೋ ಕುಳಿತು ಜನರಿಗೆ ಸಾಲ ಕೊಟ್ಟು ಅವರನ್ನು ಶೋಷಣೆ ಮಾಡುವ ಕೆಲಸವನ್ನು ಬಂಡವಾಳಶಾಹಿಗಳು ಮಾಡುತ್ತಿದ್ದಾರೆ. ಜನರು ಕಷ್ಟಕ್ಕಾಗಿ ಸಾಲ ಪಡೆಯುತ್ತಾರೆ. ಆದರೆ ಅವರನ್ನು ಶೋಷಣೆ ಮಾಡಲು ಅತಿಹೆಚ್ಚು ಬಡ್ಡಿ ಹಾಕಿ ಸತಾಯಿಸುತ್ತಿದ್ದಾರೆ. ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ನಿಂದ ಸಾಲ ಪಡೆದು ಅನೇಕ ಜನರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಶೋಷಣೆ ನಿಲ್ಲಬೇಕು ಎನ್ನುವ ಉದ್ದೇಶದಿಂದ ಮುಖ್ಯಮಂತ್ರಿಗಳು ಮಹತ್ವದ ಕಾಯ್ದೆ ತಿದ್ದುಪಡಿ ಮಾಡಿದ್ದಾರೆ. ಆದರೆ ರಾಜ್ಯಪಾಲರು ಇದಕ್ಕೆ ಅಂಕಿತ ಹಾಕಲು ಮೀನಾಮೇಷ ಎಣಿಸುತ್ತಿರುವುದು ಸರಿಯಲ್ಲ ಎಂದು ತಿಳಿಸಿದರು. ಪ್ರತಿಭಟನೆಯಲ್ಲಿ ಸುಂದರ ಸಿಂಗ್, ಎನ್.ಡಿ.ವಸಂತಕುಮಾರ್, ರವಿಕುಗ್ವೆ, ಪರಮೇಶ್ವರ ದೂಗೂರು, ಮರಿಯಾ ಲೀಮಾ, ಎಚ್.ಬಿ.ರಾಘವೇಂದ್ರ, ರಾಮಣ್ಣ ಹಸಲರು, ನಾಗರಾಜ್, ಸರೋಜಾ, ವಿಲ್ಸನ್ ಗೋನ್ಸಾಲ್ವಿಸ್, ಯು.ಪಿ.ಜೋಸ್ೆ, ಗುತ್ಯಪ್ಪ, ನಾರಾಯಣ, ಲಕ್ಷ್ಮಣ್ ಸಾಗರ್, ಮೈಕೆಲ್ ಡಿಸೋಜ, ಆರ್ಥರ್ ಗೋಮ್ಸ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net