ಮೈಸೂರಿನ ವರ್ಣಚಿತ್ರ ಕಲೆಗಳು” ಕುರಿತು ಮಾಸಿಕ ಸರಣಿ ವಿಶೇಷ ಉಪನ್ಯಾಸ ಕಾರ್ಯಕ್ರಮ

YLP DRAMA
Published on

ಪುರಾತತ್ವ, ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖಾವತಿಯಿಂದ ಸೆಪ್ಟೆಂಬರ್ 30 ರಂದು ಬೆಳಗ್ಗೆ 11 ಗಂಟೆಗೆ ಆಯುಕ್ತರ ಕಛೇರಿ, ಪುರಾತತ್ವ, ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ, ಕರ್ನಾಟಕ ದಸರಾ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣ (Mysore Dasara Exhibition Ground ಇಂದಿರಾನಗರ, ಮೈಸೂರು ಇಲ್ಲಿ “ಮೈಸೂರಿನ ವರ್ಣಚಿತ್ರ ಕಲೆಗಳು” ಕುರಿತು ಮಾಸಿಕ ಸರಣಿ ವಿಶೇಷ ಉಪನ್ಯಾಸವನ್ನು ಹಮ್ಮಿಕೊಳ್ಳಲಾಗಿದೆ.

 ಸಾಂಪ್ರದಾಯಿಕ ವರ್ಣಚಿತ್ರ ತಜ್ಞರಾದ (National Research Conservation Laboratory) ಸಹನ ಅವರು ಉಪನ್ಯಾಸ ನೀಡಲಿದ್ದು, ಉಪನ್ಯಾಸ ಕಾರ್ಯಕ್ರಮದಲ್ಲಿ ಆಸಕ್ತ ವಿದ್ಯಾರ್ಥಿಗಳು/ ಇತಿಹಾಸ ಆಸಕ್ತರು/ ಸಂಶೋಧಕರು ಹಾಗೂ ಸಾರ್ವಜನಿಕರು ಭಾಗವಹಿಸಬಹುದಾಗಿದೆ.

 ಹೆಚ್ಚಿನ ಮಾಹಿತಿಗಾಗಿ ಕಛೇರಿ ಸ್ಥಿರ ದೂರವಾಣಿ ಸಂಖ್ಯೆ 0821-2424671 ಅನ್ನು ಕಛೇರಿ (ಬೆಳಗ್ಗೆ 10.30 ರಿಂದ ಸಂಜೆ 5.30 ಗಂಟೆ) ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ. ಎಂದು ಪುರಾತತ್ವ, ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net