ಮೈಸೂರು ದಸರಾ ಕನ್ನಡ ಪುಸ್ತಕ ಮಾರಾಟ ಮೇಳ-2025

stack-of-school-education-text-books-clip-art-59406
Published on

ಜಗತ್ತಿನ ಪ್ರಸಿದ್ಧ ಮೈಸೂರು ದಸರಾ ಉತ್ಸವ-2025ರಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮೈಸೂರು ದಸರಾ ಉತ್ಸವ ಸಮಿತಿ, ಮೈಸೂರು ಇವರ ಸಂಯುಕ್ತಾಶ್ರಯದಲ್ಲಿ ಸೆಪ್ಟೆಂಬರ್ 22 ರಿಂದ ಆಕ್ಟೋಬರ್ 01 ರವರೆಗೆ “ಮೈಸೂರು ದಸರಾ ಕನ್ನಡ ಪುಸ್ತಕ ಮಾರಾಟ ಮೇಳ-2025”ನ್ನು ಸ್ಕೌಟ್ಸ್ ಮತ್ತು ಗೈಡ್ಸ್ ಮೈದಾನ, ಹಳೆ ಡಿ.ಸಿ. ಕಚೇರಿ ಎದುರು, ಮೈಸೂರು ಇಲ್ಲಿ ಏರ್ಪಡಿಸಲಾಗುತ್ತಿದೆ.

ಈ ಪುಸ್ತಕ ಮೇಳದಲ್ಲಿ ಕನ್ನಡ ಪ್ರಕಾಶಕರು / ಮಾರಾಟಗಾರರು ಭಾಗವಹಿಸಬಹುದಾಗಿದ್ದು, ಮಳಿಗೆಯೊಂದಕ್ಕೆ ರೂ. 1000-00/-ಗಳ ಭದ್ರತಾ ಠೇವಣಿ ಡಿ.ಡಿ.ಯನ್ನು ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಬೆಂಗಳೂರು – ಅವರ ಹೆಸರಿನಲ್ಲಿ ಡಿ.ಡಿಗಳನ್ನು ಸಲ್ಲಿಸಬೇಕು. ಮೇಳದಲ್ಲಿ ಭಾಗವಹಿಸಲು ಇಚ್ಚಿಸುವ ಪ್ರಕಾಶಕರು/ಮಾರಾಟಗಾರರು ನಿಗದಿತ ಅರ್ಜಿ ನಮೂನೆಯನ್ನು ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರಿನ ಕಛೇರಿ ಅಥವಾ ಆಯಾ ಜಿಲ್ಲೆಯಲ್ಲಿರುವ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಛೇರಿಗಳಲ್ಲಿ ಅಥವಾ ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ https://kpp.karnataka.gov.in ನಲ್ಲಿ ಪಡೆದುಕೊಳ್ಳಬಹುದಾಗಿದೆ.

ಭರ್ತಿ ಮಾಡಿದ ಅರ್ಜಿಯನ್ನು ಡಿ.ಡಿ.ಯೊಂದಿಗೆ ಸೆಪ್ಟೆಂಬರ್ 18 ರಂದು ಸಂಜೆ 5 ಗಂಟೆಯೊಳಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು – ಅವರ ಹೆಸರಿಗೆ ಅಂಚೆಯ ಮೂಲಕ ಹಾಗೂ ಇ-ಮೇಲ್ kannadappradhikara@gmail.com ರ ಮೂಲಕ ಸಲ್ಲಿಸ ಬಹುದಾಗಿದೆ.

 ಹೆಚ್ಚಿನ ಮಾಹಿತಿಗಾಗಿ ಆಡಳಿತಾಧಿಕಾರಿಗಳು ಕನ್ನಡ ಪುಸ್ತಕ ಪ್ರಾಧಿಕಾರ ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು ಇವರ ದೂ. ಸಂ: 080-22484516 / 22107704 ನ್ನು ಸಂಪರ್ಕಿಸಬಹುದು ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿಗಳಾದ ಕೆ.ಬಿ. ಕಿರಣ್ ಸಿಂಗ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net