

ಮೈಸೂರು ನಗರ ಪತ್ರಿಕಾ ವಿತರಕರ ಸಂಘದ ವತಿಯಿಂದ ಹೊರ ತಂದಿರುವ 2025ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮವು ಜ.17 ರಂದು ನಡೆಯಲಿದೆ.
ಅಂದು ಬೆಳಗ್ಗೆ 11.30ಕ್ಕೆ ನಗರದ ಪತ್ರಕರ್ತರ ಭವನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ದೀಪಕ್ ಕ್ಯಾಲೆಂಡರ್ ಬಿಡುಗಡೆ ಮಾಡಲಿದ್ದಾರೆ. ಮಾಜಿ ಶಾಸಕ ಎಸ್.ಎ.ರಾಮದಾಸ್ ಅಧ್ಯಕ್ಷತೆ ವಹಿಸಲಿದ್ದಾರೆ. ಇದೇ ವೇಳೆ ಪತ್ರಿಕಾ ವಿತರಕರಾಗಿ ಸೇವೆ ಸಲ್ಲಿಸಿರುವ ಹಿರಿಯರನ್ನು ಸನ್ಮಾನಿಸಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.