ವಿಜಯವಾಣಿ ಸುದ್ದಿಜಾಲ ಕೋಲಾರ
ರಾಜ್ಯದಲ್ಲಿ ಮೊದಲ ಬಾರಿಗೆ ರೈತರವಾದ ಬಜೆಟ್ ಮಂಡನೆ ಮಾಡಿ, ರಾಜ್ಯದಲ್ಲಿ ನಾಲ್ಕು ಬಾರಿ ಸಿಎಂ ಆಗಿ ಅಭಿವೃದ್ಧಿಯ ಮುಂದಾಲೋಚನೆಯ ಯೋಜನೆಗಳನ್ನು ರೂಪಿಸಿದ ಕೀರ್ತಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಸಲ್ಲುತ್ತದೆ ಎಂದು ಬಿಜೆಪಿ ಜಿಲ್ಲಾ ಅಧ್ಯಕ್ಷ ಓಂಶಕ್ತಿ ಚಲಪತಿ ತಿಳಿಸಿದರು.
ನಗರದ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಗುರುವಾರ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಜನ್ಮ ದಿನಾಚರಣೆ ಪ್ರಯುಕ್ತ ಭಾಗ್ಯಲಕ್ಷ್ಮೀ ಯೋಜನೆಯ ಹತ್ತು ಜನ ಪಲಾನುಭವಿಗಳಿಗೆ ಸನ್ಮಾನಿಸಿ ಮಾತನಾಡಿ, ರಾಜ್ಯದಲ್ಲಿ ಬಿಜೆಪಿ ಪಕ್ಷವು ಬಲಗೊಳ್ಳಲು ಯಡಿಯೂರಪ್ಪನವರು ಕೈಗೊಂಡ ಜನಪರ ಯೋಜನೆಗಳೇ ಕಾರಣವಾಗಿದೆ. ದೇಶಾದ್ಯಂತ ಬಿಜೆಪಿ ಪಕ್ಷವು ಕಾರ್ಯಕರ್ತರ ಪಕ್ಷವಾಗಿದೆ. ಸಾಮಾನ್ಯ ಕಾರ್ಯಕರ್ತರನ್ನು ಗುರುತಿಸಿ ಸ್ಥಾನಮಾನವನ್ನು ನೀಡುತ್ತಾರೆ ಎಂದರು.
ಯಡಿಯೂರಪ್ಪ ಒಂದು ಬಾರಿ ಮಾತು ಕೊಟ್ಟರೆ ತಪ್ಪಿದ ಇತಿಹಾಸವಿಲ್ಲ. ಅದಕ್ಕಾಗಿಯೇ ರಾಜ್ಯದ ೨೨೪ ಕ್ಷೇತ್ರದಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಭಾಗ್ಯಲಕ್ಷ್ಮೀ ಬಾಂಡ್ ಕೊಟ್ಟಿದ್ದಾರೆ. ಅದು ೧೮ ವರ್ಷಗಳ ನಂತರ ಪ್ರಯೋಜನವಾಗುತ್ತದೆ. ಅದೇ ಹಾದಿಯಲ್ಲಿ ಸಂಧ್ಯಾಸುರಕ್ಷಾ ಯೋಜನೆ, ವಿಧ್ಯಾರ್ಥಿಗಳಿಗೆ ಸೈಕಲ್ ವಿತರಣೆ, ಆರೋಗ್ಯ ಕವಚ, ಎಸ್ಸಿಪಿ ಟಿಎಸ್ಪಿ ಮೂಲಕ ಸಮುದಾಯವನ್ನು ಅಭಿವೃದ್ಧಿ ಮಾಡಿದ್ದಾರೆ. ಶೌಚಾಲಯ, ವಸತಿ ವ್ಯವಸ್ಥೆ ಅಂತಹ ಯೋಜನೆಗಳು ಅವರ ಅವಧಿಯಲ್ಲಿ ಪ್ರಾರಂಭವಾಗಿದ್ದು, ಹೆಮ್ಮೆಯಿಂದ ಬಿಜೆಪಿ ಕಾರ್ಯಕರ್ತರು ಹೇಳಬಹುದಾಗಿದೆ ಎಂದರು.
ಬಿಜೆಪಿ ಜಿಲ್ಲಾ ಮಾಧ್ಯಮ ಸಹ ಸಂಚಾಲಕ ಕೆಂಬೋಡಿ ನಾರಾಯಣಸ್ವಾಮಿ ಮಾತನಾಡಿ, ರಾಜ್ಯ ಅಭಿವೃದ್ಧಿಗೆ ಯಡಿಯೂರಪ್ಪ ಕೊಡುಗೆ ಅಪಾರವಾಗಿದೆ. ಮೊದಲ ಬಾರಿಗೆ ರಾಜ್ಯದಲ್ಲಿ ರೈತರ ಪರವಾದ ಬಜೆಟ್ ಮಂಡನೆ ಮಾಡಿದ್ದಾರೆ. ಮಹಿಳೆಯರು ಕಾರ್ಮಿಕರ ಅಭಿವೃದ್ಧಿಪರ ಯೋಜನೆಗಳನ್ನು ರೂಪಿಸಿದ್ದಾರೆ. ವಿಧ್ಯಾರ್ಥಿಗಳಿಗೆ ವಿಧ್ಯಾರ್ಥಿವೇತನದ ಜೊತೆಗೆ ಸೈಕಲ್ ವಿತರಣೆ ಅವರ ಅನುಯಾಯಿಯಾಗಿ ನಾವು ಪಕ್ಷ ಕಟ್ಟೋಣ ಎಂದರು
ಕುಡಾ ಮಾಜಿ ಅಧ್ಯಕ್ಷ ವಿಜಯಕುಮಾರ್, ಬಿಜೆಪಿ ನಗರ ಘಟಕದ ಅಧ್ಯಕ್ಷ ಸಾ.ಮಾ ಅನಿಲ್ ಬಾಬು, ಕಾನೂನು ಪ್ರಕೋಷ್ಠ ಜಿಲ್ಲಾ ಸಂಚಾಲಕ ಮಂಜುನಾಥ್, ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ಗಜಲಕ್ಷ್ಮೀ, ಒಬಿಸಿ ನಗರಾಧ್ಯಕ್ಷ ಶ್ರೀನಾಥ್ ಮುಖಂಡರಾದ ಹಾರೋಹಳ್ಳಿ ವೆಂಕಟೇಶ್, ಸತ್ಯನಾರಾಯಣರಾವ್, ಅಪ್ಪಿ ನಾರಾಯಣಸ್ವಾಮಿ, ಮಂಜುನಾಥ್, ಆನಂದ್, ರಾಜೇಶ್, ಮಹೇಶ್, ಸುಬ್ರಮಣಿ, ನಾಗೇಂದ್ರ ಸಾಯಿ ಮುಂತಾದವರು ಇದ್ದರು.
ಚಿತ್ರ ೨೭ ಕೆ.ಎಲ್.ಆರ್. ೦೮ : ನಗರದ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಗುರುವಾರ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಜನ್ಮ ದಿನಾಚರಣೆ ಪ್ರಯುಕ್ತ ಭಾಗ್ಯಲಕ್ಷ್ಮೀ ಯೋಜನೆಯ ಹತ್ತು ಜನ ಪಲಾನುಭವಿಗಳನ್ನು ಸನ್ಮಾನಿಸಲಾಯಿತು. ಬಿಜೆಪಿ ಜಿಲ್ಲಾ ಅಧ್ಯಕ್ಷ ಓಂಶಕ್ತಿ ಚಲಪತಿ, ಬಿಜೆಪಿ ಜಿಲ್ಲಾ ಮಾಧ್ಯಮ ಸಹ ಸಂಚಾಲಕ ಕೆಂಬೋಡಿ ನಾರಾಯಣಸ್ವಾಮಿ ಮುಂತಾದವರು ಇದ್ದರು.