ಯತೀಂದ್ರಗೆ ಸರ್ಕಾರದ ಮಟ್ಟದಲ್ಲಿ ಸ್ಥಾನ ಸಿಗಲಿ

21tnpnewsfile01 (5)
ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್‌ನ ಮೈಸೂರು ಜಿಲ್ಲಾ ಮಾಧ್ಯಮ ವಕ್ತಾರ ಸಂತೃಪ್ತಿ ಕುಮಾರ್ ಮಾತನಾಡಿದರು.
Published on

ತಿ.ನರಸೀಪುರ: ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಉನ್ನತ ಸ್ಥಾನಮಾನ ನೀಡುವ ಮೂಲಕ ಕ್ಷೇತ್ರದ ಕಡೆ ಗಮನ ಹರಿಸಲು ಅವಕಾಶ ಕಲ್ಪಿಸಿಕೊಡಬೇಕೆಂದು ಕಾಂಗ್ರೆಸ್‌ನ ಮೈಸೂರು ಜಿಲ್ಲಾ ಮಾಧ್ಯಮ ವಕ್ತಾರ ಸಂತೃಪ್ತಿ ಕುಮಾರ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಮನವಿ ಮಾಡಿದರು.

ಸಿದ್ದರಾಮಯ್ಯ ಅವರು ವರುಣ ಕ್ಷೇತ್ರದಿಂದ ಎರಡನೇ ಬಾರಿ ಗೆದ್ದು ಮುಖ್ಯಮಂತ್ರಿಯಾಗಿರುವುದು ಹೆಮ್ಮೆಯ ವಿಷಯ. ಅವರು ಕೇಚಲ ವರುಣ ಕ್ಷೇತ್ರಕ್ಕೆ ಸೀಮಿತವಾಗಿಲ್ಲ. ಬದಲಾಗಿ ರಾಜ್ಯದ ಜವಾಬ್ದಾರಿ ಹೊತ್ತಿರುವುದರಿಂದ ಕಾರ್ಯಕರ್ತರು, ಸಾರ್ವಜನಿಕರು ಹಾಗು ಮುಖಂಡರಿಗೆ ಹೆಚ್ಚಿನ ಸಮಯ ಮೀಸಲಿಡಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಕ್ಷೇತ್ರ ನೋಡಿಕೊಳ್ಳುವ ಜವಾಬ್ದಾರಿ ವಹಿಸುವುದು ಪ್ರಸ್ತುತ ಸಂದರ್ಭದಲ್ಲಿ ಅವಶ್ಯಕತೆ ಹೆಚ್ಚಿದೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಯತೀಂದ್ರ ಅವರು ವರುಣ ಕ್ಷೇತ್ರದಿಂದ ಶಾಸಕರಾಗಿದ್ದಾಗ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ. ಹಾಗಾಗಿ ಸಿದ್ದರಾಮಯ್ಯ ಅವರು ಸರ್ಕಾರದಲ್ಲಿ ಸೂಕ್ತ ಸ್ಥಾನ ಮಾನ ನೀಡಿ ಕ್ಷೇತ್ರದ ಜನತೆಯ ಕೆಲಸ ಮಾಡಕೊಡಲು ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿದರು.

ಕ್ಷೇತ್ರದ ಜನತೆ ಸಮಸ್ಯೆ ಹೇಳಿಕೊಳ್ಳಲು ಬೆಂಗಳೂರಿಗೆ ಹೋಗಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ. ಸಾಮಾನ್ಯ ಜನರ ಕಷ್ಟ ಸುಖ ಕೇಳಲು ಸಿದ್ದರಾಮಯ್ಯ ಅವರಿಗೆ ಸಮಯ ಇಲ್ಲದ ಕಾರಣ ಯತೀಂದ್ರ ಅವರಿಗೆ ಸರ್ಕಾರದಲ್ಲಿ ಉನ್ನತ ಸ್ಥಾನಮಾನ ನೀಡಬೇಕೆಂದು ಒತ್ತಾಯಿಸಿದರು.

ಕಾಂಗ್ರೆಸ್ ಮುಖಂಡರಾದ ರೇವಣ್ಣ, ಬಸಪ್ಪ, ಲಿಂಗರಾಜು, ಮನ್ನೇಹುಂಡಿ ಪರಶಿವ, ಪ್ರಕಾಶ್, ಡಿಸಿಸಿ ವೈದ್ಯಕೀಯ ವಿಭಾಗದ ಅಧ್ಯಕ್ಷ ಡಾ.ಪ್ರದೀಪ್, ಸೋಮಣ್ಣ ನಾಯಕ ಸುದ್ದಿಗೋಷ್ಠಿಯಲ್ಲಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net