ಯಳಂದೂರಿನಲ್ಲಿ ಗ್ರಾಮೀಣ ಕ್ರೀಡಾಕೂಟ

23 yelandur 01
ಯಳಂದೂರು ತಾಲೂಕಿನ ಹೊನ್ನೂರು ಗ್ರಾಮದ ಡಾ.ಭೀಮ್‌ರಾವ್ ರಾಮ್‌ಜಿ ಪ್ರೌಢಶಾಲೆಯ ಆವರಣದಲ್ಲಿ ಶುಕ್ರವಾರ ಗ್ರಾಮೀಣ ಕ್ರೀಡಾಕೂಟ ನಡೆಯಿತು.
Published on

ಯಳಂದೂರು: ತಾಲೂಕಿನ ಹೊನ್ನೂರು ಗ್ರಾಮದ ಡಾ.ಭೀಮರಾವ್ ರಾಮ್‌ಜಿ ಪ್ರೌಢಶಾಲೆ ಆವರಣದಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಪಂ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ತಾಲೂಕು ಮಟ್ಟದ ಗ್ರಾಮೀಣ ಕ್ರೀಡಾಕೂಟ ಆಯೋಜಿಸಲಾಗಿತ್ತು.

ಇಲಾಖೆಯ ಸಹಾಯಕ ನಿರ್ದೇಶಕಿ ಆರ್.ಅನಿತಾ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಇರುವ ಪ್ರತಿಭಾವಂತ ಕ್ರೀಡಾಪಟುಗಳಿಗೆ ಉತ್ತೇಜನ ನೀಡಲು ಕ್ರೀಡಾಕೂಟ ಆಯೋಜಿಸಲಾಗುತ್ತಿದೆ. ಇದರಲ್ಲಿ ವಿಜೇತರಾದವರು ಜಿಲ್ಲಾ ಹಾಗೂ ರಾಜ್ಯಮಟ್ಟಕ್ಕೆ ಆಯ್ಕೆಯಾಗಲಿದ್ದಾರೆ ಎಂದರು.

ಯಳಂದೂರು ತಾಲೂಕಿನಲ್ಲಿ ವಾಲಿಬಾಲ್, ಕಬಡ್ಡಿ, ಖೋ ಖೋ ಹಾಗೂ ಯೋಗ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ವಾಲಿಬಾಲ್, ಕಬಡ್ಡಿ ಹಾಗೂ ಖೋಖೋ ವಿಜೇತ ತಂಡಕ್ಕೆ ಪ್ರಥಮ ಬಹುಮಾನ 9,600 ರೂ., ದ್ವಿತೀಯ 7200 ರೂ. ಹಾಗೂ ತೃತೀಯ 3600 ರೂ.ನಗದು ಹಾಗೂ ಟ್ರೋಫಿ ನೀಡಲಾಗುತ್ತದೆ. ಯೋಗ ಸ್ಪರ್ಧೆ ವಿಜೇತರಿಗೆ ಪ್ರಥಮ 1,000 ರೂ., ದ್ವಿತೀಯ 600 ರೂ. ಹಾಗೂ ತೃತೀಯ ಬಹುಮಾನವಾಗಿ 400 ರೂ. ನೀಡಲಾಗುತ್ತದೆ ಎಂದು ತಿಳಿಸಿದರು

ಯಳಂದೂರು ಪಟ್ಟಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಇಲಾಖೆ ಬದ್ಧವಾಗಿದೆ. ಆದರೆ ಇಲ್ಲಿ 6 ಎಕರೆ ಜಮೀನು ಅಗತ್ಯವಿದ್ದು, ಈ ವಿಷಯವನ್ನು ಸ್ಥಳೀಯ ಶಾಸಕರ ಗಮನಕ್ಕೂ ತರಲಾಗಿದೆ. ಜಮೀನು ದೊರಕಿದ್ದಲ್ಲಿ ಸುಸಜ್ಜಿತ ಕ್ರೀಡಾಂಗಣ ನಿರ್ಮಾಣ ಮಾಡಲು ಇಲಾಖೆ ಸಿದ್ಧವಾಗಿದೆ ಎಂದು ಮಾಹಿತಿ ನೀಡಿದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಮಧು, ರಂಗಸ್ವಾಮಿ, ದೊರೆಸ್ವಾಮಿ, ರೇವಣ್ಣ, ರವಿ, ಮಂಜು ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net