

ಯಾದಗಿರಿ: ಜಿಲ್ಲೆಯ ಕೆಂಭಾವಿ ಸಮೀಪದ ಹಾಲಾಳ ಬೆಟ್ಟದಲ್ಲಿ ನಡೆಯುತ್ತಿದ್ದ ಅಕ್ರಮ ಕಲ್ಲು ಕ್ವಾರಿಯ ಮೇಲೆ ಪೊಲೀಸರು ಭಾನುವಾರ ಬೆಳಗ್ಗೆ ದಾಳಿ ನಡೆಸಿದ್ದು 750 ಕೆ.ಜಿ.ಸ್ಫೋಟಕ ವಶಕ್ಕೆ ಪಡೆದುಕೊಂಡಿದ್ದಾರೆ.
ಕಲಬುರಗಿ-ಯಾದಗಿರಿ ಐಎಸ್ಡಿ ಪೊಲೀಸರಿಂದ ಕಲ್ಲು ಕ್ವಾರಿ ಮೇಲೆ ದಾಳಿ ನಡೆಸಲಾಗಿದ್ದು, ಅಕ್ರಮವಾಗಿ ಸಂಗ್ರಹಿಸಿದ್ದ 30 ಬಾಕ್ಸ್ ಐಡಿಎಲ್ 80 ಎಮ್ ಎಮ್ ಬೂಸ್ಟರ್ ಪತ್ತೆ ಹಚ್ಚಿದ್ದಾರೆ. ಈ ಅಕ್ರಮದಲ್ಲಿ ಪ್ರಭಾವಿ ವ್ಯಕ್ತಿಯೊಬ್ಬರು ಭಾಗಿಯಾಗಿದ್ದಾರೆ ಎಂಬ ಅನುಮಾನಗಳು ಮೂಡಿವೆ. ಇಂಟ್ರನಲ್ ಸೆಕ್ಯೂರಿಟಿ ಡಿವಿಜನ್ ಪಿಐ ಅಡೆಪ್ಪ ಬನ್ನಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.
ಸ್ಥಳಕ್ಕೆ ಎಸ್.ಪಿ ಋಷಿಕೇಶ್ ಭಗವಾನ್ ಸೋನವಣೆ ಭೇಟಿ ನೀಡಿದ್ದು, ಕೆಂಭಾವಿ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಿಸಲಾಗುವುದು ಎಂದು ಅವರು ವಿಜಯವಾಣಿಗೆ ತಿಳಿಸಿದ್ದಾರೆ.