

ಹನೂರು: ತಾಲೂಕಿನ ಬಂಡಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಂಟರದೊಡ್ಡಿ ಗ್ರಾಮದ ನಿವಾಸಿ ಹಾಗೂ ಶ್ರೀ ಮಹದೇಶ್ವರ ಕೈಗಾರಿಕಾ ತರಬೇತಿ ಸಂಸ್ಥೆಯ ವಿದ್ಯಾರ್ಥಿ ರಂಗಸ್ವಾಮಿ (18) ನಾಪತ್ತೆಯಾಗಿದ್ದಾನೆ.
ಎರಡು ತಿಂಗಳಿಂದ ಕಾಲೇಜಿಗೆ ತೆರಳದೆ ಮನೆಯಲ್ಲಿದ್ದ. ಮೂರ‌್ನಾಲ್ಕು ದಿನಗಳ ಹಿಂದೆ ತನ್ನ ತಾಯಿ ಬಳಿ ಹನೂರಿಗೆ ಹೋಗಿ ಬರುತ್ತೇನೆ ಎಂದು ಹೇಳಿ ಹೋಗಿದ್ದು, ಈವರೆಗೂ ಮನೆಗೆ ಬಂದಿಲ್ಲ ಎಂದು ತಾತ ರಂಗಸ್ವಾಮಿ ಹನೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಈತನ ಬಗ್ಗೆ ಸುಳಿವು ಸಿಕ್ಕಲ್ಲಿ ಕೂಡಲೇ ಪೊಲೀಸ್ ಠಾಣೆಗೆ ಮಾಹಿತಿ ತಿಳಿಸುವಂತೆ ಪೊಲೀಸ್ ಪ್ರಕಟಣೆ ತಿಳಿಸಿದೆ.