ಯುವಜನತೆ ಉತ್ತಮ ಜೀವನಶೈಲಿ ರೂಢಿಸಿಕೊಳ್ಳಲಿ

12sri-1police
Published on

ಶೃಂಗೇರಿ: ಯುವಜನತೆ ಮಾದಕ ದ್ರವ್ಯಗಳಿಗೆ ದಾಸರಾಗಬಾರದು. ಯುವಕರು ದುಶ್ಚಟಗಳಿಗೆ ಬಲಿಯಾಗಿ ಜೀವನ ಹಾಳು ಮಾಡಿಕೊಳ್ಳುತ್ತಿದ್ದು, ಇದರಿಂದ ಹೊರಬಂದು ಬದುಕನ್ನು ಸಾರ್ಥಕ ಪಡಿಸಿಕೊಳ್ಳಬೇಕು ಎಂದು ಪಿಎಸ್‌ಐ ಬಿ.ಆರ್.ನಾಗರಾಜ್ ಹೇಳಿದರು.

ನೆರಳಕೊಡಿಗೆ ಮೆಟ್ರಿಕ್ ನಂತರದ ಬಾಲಿಕಾ ವಿದ್ಯಾರ್ಥಿನಿಲಯದಲ್ಲಿ ಪೊಲೀಸ್ ಇಲಾಖೆಯಿಂದ ಶುಕ್ರವಾರ ಏರ್ಪಡಿಸಿದ್ದ ಮಾದಕದ್ರವ್ಯಗಳ ಬಳಕೆಯಿಂದ ಉಂಟಾಗುವ ದುಪ್ಪರಿಣಾಮಗಳು ಹಾಗೂ ಕಾನೂನಿನ ಕುರಿತು ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಆಧುನಿಕ ಜೀವನಶೈಲಿ ಅನುಕರಣೆ ಮಾಡಲು ವ್ಯಸನಕ್ಕೆ ಯುವಪೀಳಿಗೆ ತುತ್ತಾಗುತ್ತಿದ್ದಾರೆ. ಇದರಿಂದ ಹಿಂಸಾತ್ಮಕ ನಡವಳಿಕೆ, ಉದ್ಯೋಗ ಮತ್ತು ಕೌಟುಂಬಿಕ ಸಮಸ್ಯೆಗಳು, ಕಾನೂನುಬಾಹಿರ ಚಟುವಟಿಕೆಗಳು ನಡೆಯುತ್ತವೆ. ಹಾಗಾಗಿ ವಿದ್ಯಾರ್ಥಿಗಳು ಇಂತಹ ವಸ್ತುವಿನಿಂದ ದೂರವಿರಬೇಕು ಎಂದರು.

ಸಹಾಯಕ ಪೊಲೀಸ್ ಉಪನಿರೀಕ್ಷಕ ಸಿ.ಆರ್.ಮೋಹನ್‌ಕುಮಾರ್ ಮಾತನಾಡಿ, ಮಾದಕದ್ರವ್ಯ ನಿಯಂತ್ರಣದಲ್ಲಿ ಯುವಜನತೆ ಪಾತ್ರ ಪ್ರಮುಖವಾಗಿದೆ. ಯುವಜನತೆ ಮನಸ್ಸು ಮಾಡಿದರೆ ಅಸಾಧ್ಯ ಎಂಬುದು ಯಾವುದೂ ಇಲ್ಲ. ಮಾದಕದ್ರವ್ಯಮುಕ್ತ ಸಮಾಜ ನಿರ್ಮಿಸಲು ಎಲ್ಲರೂ ಕೈಜೋಡಿಸಬೇಕಿದೆ ಎಂದು ಹೇಳಿದರು. ವಿದ್ಯಾರ್ಥಿನಿಲಯದ ಎ.ಎಂ.ಅಶ್ವಿನಿ, ಶರಣ್ಯ, ಸಿಂಚನಾ, ಪೂಜಾ, ಕಾವ್ಯಾ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net