ಯುವನಿಧಿ ಕೌಶಲ್ಯ ತರಬೇತಿಗಾಗಿ ಉಚಿತ ನೊಂದಣಿ

yuvanidhi
Published on

ಮೈಸೂರು ಜಿಲ್ಲೆಯ ಯುವನಿಧಿ ಫಲಾನುಭವಿಗಳಿಗೆ ಯುವನಿಧಿ ಭತ್ಯೆಯ ಜೊತೆಗೆ ಉಚಿತ ಕೌಶಲ್ಯ ತರಬೇತಿ ಹಾಗೂ ಉದ್ಯೋಗ ದೊರಕಿಸಿಕೊಡುವ ನಿಟ್ಟಿನಲ್ಲಿ ಸರ್ಕಾರದ ವತಿಯಿಂದ ಉಚಿತವಾಗಿ ಕೌಶಲ್ಯ ತರಬೇತಿಯನ್ನು ನೀಡಲು ಕ್ರಮ ಕೈಗೊಳ್ಳಲಾಗಿದೆ.

 ಆದ್ದರಿಂದ ಈಗಾಗಲೇ ಯುವನಿಧಿ ಯೋಜನೆಯಡಿ ನೊಂದಣಿಯಾಗಿರುವ ಫಲಾನುಭವಿಗಳು ತಪ್ಪದೇ ಉದ್ಯೋಗಾಧಾರಿತ ಉಚಿತ ತರಬೇತಿಯನ್ನು ಪಡೆಯಲು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳು, ಮೈಸೂರು ಜಿಲ್ಲೆ, ಮೈಸೂರು ಇವರನ್ನು ಸಂಪರ್ಕಿಸಿ ಮಾಹಿತಿ ಪಡೆದು ಉಚಿತ ಕೌಶಲ್ಯ ತರಬೇತಿಗಾಗಿ ನೊಂದಣಿ ಮಾಡಿಕೊಳ್ಳಬಹುದಾಗಿದೆ.

 ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಯವರ ದೂ.ಸಂ: 8861646939 ನ್ನು ಸಂಪರ್ಕಿಸಬಹುದು ಎಂದು ಮೈಸೂರು ಜಿಲ್ಲೆಯ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net