ಯೋಗ ಚಾರಣ ಮತ್ತು ದುರ್ಗಾ ನಮಸ್ಕಾರ

Good performance in yoga competition
Published on

ಕರ್ನಾಟಕ ಸರ್ಕಾರ, ಜಿಲ್ಲಾಡಳಿತ, ನಾಡಹಬ್ಬ ಮೈಸೂರು ದಸರಾ ಮಹೋತ್ಸವ -2025 ಯೋಗ ದಸರಾ ಉಪ ಸಮಿತಿಯ ವತಿಯಿಂದ “ಯೋಗ ಚಾರಣ ಮತ್ತು ದುರ್ಗಾ ನಮಸ್ಕಾರ” ಕಾರ್ಯಕ್ರಮವನ್ನು ಸೆಪ್ಟೆಂಬರ್ 30 ರಂದು ಬೆಳಗ್ಗೆ 06 ರಿಂದ 09 ಗಂಟೆಯ ವರೆಗೆ ಚಾಮುಂಡಿ ಬೆಟ್ಟದ ತಪ್ಪಲು ಮತ್ತು ದೇವಸ್ಥಾನದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.

 ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯನವರು, ಉಕ್ಕು ಮತ್ತು ಬೃಹತ್ ಕೈಗಾರಿಕಾ ಕೇಂದ್ರ ಸಚಿವರಾದ ಹೆಚ್.ಡಿ ಕುಮಾರಸ್ವಾಮಿ ಉಪ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್, ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಡಾ. ಹೆಚ್.ಸಿ ಮಹದೇವಪ್ಪ ಅವರ ಘನ ಉಪಸ್ಥಿತಿಯಲ್ಲಿ, ಕಾರ್ಯಕ್ರಮವನ್ನು ಪಶು ಸಂಗೋಪನೆ ಮತ್ತು ರೇಷ್ಮೆ ಇಲಾಖೆ ಸಚಿವರಾದ ಕೆ.ವೆಂಕಟೇಶ್ ಅವರು ಉದ್ಘಾಟಣೆ ಮಾಡಲಿದ್ದು, ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಜಿ.ಟಿ. ದೇವೇಗೌಡ, ಅವರು ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net