ಯೋಗದಿಂದ ಆರೋಗ್ಯದಲ್ಲಿ ಉಂಟಾಗುವ ಒತ್ತಡಗಳನ್ನು ಕಡಿಮೆ ಮಾಡಿಕೊಳ್ಳುವುದು / ಡಾ.ಮೋಹನ್‌ರೆಡ್ಡಿ

Published on

ವಿಜಯವಾಣಿ ಸುದ್ದಿಜಾಲ ಕೋಲಾರ

ಅಂತರರಾಷ್ಟಿçÃಯ ಯೋಗ ದಿನಾಚರಣೆಯ ಪ್ರಯುಕ್ತ ಕೆ.ಎಸ್.ಆರ್.ಟಿ.ಸಿ. ಕೋಲಾರ ವಿಭಾಗೀಯ ಕಛೇರಿಯಲ್ಲಿ ಚಾಲಕ, ನಿರ್ವಾಹಕ ಹಾಗೂ ಸಿಬ್ಬಂದಿಗೆ ಆರೋಗ್ಯದ ಮೇಲೆ ಉಂಟಾಗುವ ಒತ್ತಡಗಳ ನಿರ್ವಹಣೆ ಬಗ್ಗೆ ಜಾಲಪ್ಪ ಆಸ್ಪತ್ರೆ ವೈದ್ಯಾಧಿಕಾರಿಗಳಿಂದ ಉಪನ್ಯಾಸ ಕಾರ್ಯಕ್ರಮವನ್ನು ಏರ್ಪಡಿಸಿಲಾಗಿತ್ತು.

ಜಾಲಪ್ಪ ಆಸ್ಪತ್ರೆ ಮನೋವಿಜ್ಞಾನ ಪ್ರಾಧ್ಯಾಪಕ ಡಾ.ಮೋಹನ್‌ರೆಡ್ಡಿ ಮಾತನಾಡಿ, ಯೋಗ ಮಾಡುವುದರಿಂದ ಅನೇಕ ಒತ್ತಡಗಳನ್ನು ನಿವಾರಣೆ ಮಾಡಿಕೊಳ್ಳಬಹುದು. ಕೆ.ಎಸ್.ಆರ್.ಟಿ.ಸಿ. ಸಂಸ್ಥೆಯಲ್ಲಿ ಕೆಲಸ ನಿರ್ವಹಿಸುವ ಸಿಬ್ಬಂದಿ ಮಾನಸಿಕ ಒತ್ತಡಗಳಿಗೆ ಒಳಗಾಗುತ್ತಾರೆ. ಸಮಯದ ಕೊರತೆ ಇದ್ದರೆ ಬಿಡುವು ಸಿಕ್ಕಿದಲ್ಲಿ ಯೋಗವನ್ನು ಮಾಡುವುದರಿಂದ ಮಾನಸಿಕ ಒತ್ತಡಗಳು ಕಡಿಮೆ ಮಾಡಿಕೊಳ್ಳಬಹುದು ಎಂದರು.

ಮನೋವಿಜ್ಞಾನದ ಸಹಾಯಕ ಪ್ರಾಧ್ಯಾಪಕ ಡಾ|| ಜಗದೀಶ್ ಮತ್ತು ಡಾ|| ವಿಜೇತ ದಾಸ್ ಇವರು ಸಿಬ್ಬಂದಿಗೆ ಯೋಗ ಮತ್ತು ಅದರಿಂದಾಗುವ ಅನುಕೂಲಗಳು ಮತ್ತು ಆರೋಗ್ಯ ನಿರ್ವಹಣೆ ಬಗ್ಗೆ ಉಪನ್ಯಾಸ ನೀಡಿದರು.

ಕೆ.ಎಸ್.ಆರ್.ಟಿ.ಸಿ. ವಿಭಾಗೀಯ ನಿಯಂತ್ರಣಾಧಿಕಾರಿ ಶ್ರೀನಾಥ್, ಡಿಟಿಓ ಮಂಜುನಾಥ್ ಹಾಗೂ ವಿಭಾಗೀಯ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

ಚಿತ್ರ ೨೧ ಕೆ.ಎಲ್.ಆರ್. ೦೧ : ಅಂತರ ರಾಷ್ಟಿçÃಯ ಯೋಗ ದಿನಾಚರಣೆ ಅಂಗವಾಗಿ ಕೋಲಾರ ನಗರದ ಕೆ.ಎಸ್.ಆರ್.ಟಿ.ಸಿ. ವಿಭಾಗೀಯ ಕಛೇರಿಯಲ್ಲಿ ಸಿಬ್ಬಂದಿ ಆರೋಗ್ಯದ ಮೇಲೆ ಉಂಟಾಗುವ ಒತ್ತಡಗಳ ನಿರ್ವಹಣೆಯ ಬಗ್ಗೆ ಉಪನ್ಯಾಸ ನೀಡುವ ಕಾರ್ಯಕ್ರಮದಲ್ಲಿ ಡಾ.ಮೋಹನ್‌ರೆಡ್ಡಿ ಮತ್ತು ಡಾ.ಜಗದೀಶ್ ಮುಂತಾದವರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net