ಯೋಜನೆಯ ಜಿಲ್ಲಾ ಮಟ್ಟದ ಅರಿವು ಮೂಡಿಸುವ ಕಾರ್ಯಕ್ರಮ

Narendra Modi,Partition
Published on

2025-26 ನೇ ಸಾಲಿನ ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ದಗೊಳಿಸುವಿಕೆ (Prime Minister Formalization of Micro Food Processing Enterprises-PMFME)ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಒಂದು ಮಹತ್ವಾಕಾಂಕ್ಷೆ ಯೋಜನೆಯಾಗಿದ್ದು, ರಾಜ್ಯದಲ್ಲಿ ಕಿರು ಆಹಾರ ಸಂಸ್ಕರಣಾ ಉದ್ದಿಮೆಯ ಅಭಿವೃದ್ಧಿಗೆ ಸುವರ್ಣಾವಕಾಶ ಕಲ್ಪಿಸುತ್ತದೆ. ಪ್ರಸ್ತುತ ಹಣಕಾಸಿನ ವರ್ಷವು ಯೋಜನೆಯ ಅನುಷ್ಟಾನದ ಕೊನೆಯ ವರ್ಷವಾಗಿರುತ್ತದೆ. ಈ ಯೋಜನೆಯ ಪ್ರಯೋಜನವನ್ನು ನಮ್ಮ ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಫಲಾನುಭವಿಗಳು ಪಡೆದುಕೊಳ್ಳುವ ಸಲುವಾಗಿ ಪಾಲುದಾರರಿಗೆ ಅರಿವು, ಮೂಡಿಸುವ ಕಾರ್ಯಕ್ರಮವನ್ನು ಆಗಸ್ಟ್ 21 ರಂದು ಬೆಳಿಗ್ಗೆ 10.30 ಗಂಟೆಗೆ ಆಯೋಜಿಸಲಾಗಿದೆ.

 ಸಮಾಜ ಕಲ್ಯಾಣ ಇಲಾಖೆ ಸಚಿವರು ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಹೆಚ್.ಸಿ. ಮಹದೇವಪ್ಪ, ಇವರ ಮುಂದಾಳತ್ವದಲ್ಲಿ ಅಬ್ದುಲ್ ನಜೀರ್ ಸಾಬ್ ಸಭಾಂಗಣ, ಜಿಲ್ಲಾ ಪಂಚಾಯತ್, ಮೈಸೂರು ಇಲ್ಲಿ ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಯೋಜನೆಯ ಬಗ್ಗೆ ಅರಿವು ಮೂಡಿಸಲಿದ್ದು ಯೋಜನೆಯಡಿ ಫಲಾನುಭವಿಯಾಗಲು ಇಚ್ಚಿಸುವವರಿಗೆ ನೋಂದಣಿ ಮಾಡಿಕೊಳ್ಳಲಾಗುವುದು ಎಂದು ಮೈಸೂರು ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕರು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net