ರಕ್ತದಾನವೂ ಸಮಾಜ ಸೇವೆಯ ಭಾಗ

blood
ನೆಹರು ರಸ್ತೆ ವರ್ತಕರ ಸಂಘದಿಂದ ಏರ್ಪಡಿಸಿದ್ದ ರಕ್ತದಾನ ಶಿಬಿರದಲ್ಲಿ ಬಿ.ರಂಗನಾಥ್, ಆರ್.ಗಿರೀಶ್, ಎಂ.ಆರ್.ಸುರೇಶ್, ಜಿ.ವಿಜಯಕುಮಾರ್ ಇದ್ದರು.
Published on

ಶಿವಮೊಗ್ಗ: ವೃತ್ತಿ ಜತೆಗೆ ಸಮಾಜ ಸೇವೆಯೂ ಮುಖ್ಯ. ರಕ್ತದಾನ ಸಹ ಸಮಾಜ ಸೇವೆಯ ಒಂದು ಭಾಗ. ಸಮಾಜಮುಖಿ ಸೇವೆಗಳನ್ನು ಸಲ್ಲಿಸುವ ಮೂಲಕ ಬದುಕು ಸಾರ್ಥಕ ಮಾಡಿಕೊಳ್ಳಬೇಕು ಎಂದು ನೆಹರು ರಸ್ತೆ ವರ್ತಕರ ಸಂಘದ ಅಧ್ಯಕ್ಷ ಬಿ.ಎ.ರಂಗನಾಥ್ ಹೇಳಿದರು.

ವಿಶ್ವ ಕ್ಯಾನ್ಸರ್ ದಿನಾಚರಣೆ ಅಂಗವಾಗಿ ನೆಹರು ರಸ್ತೆ ವರ್ತಕರ ಸಂಘ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ, ಸಂಜೀವಿನಿ ರಕ್ತ ನಿಧಿ ಸಹಯೋಗದಲ್ಲಿ ಏರ್ಪಡಿಸಿದ್ದ ಸ್ವಯಂಪ್ರೇರಿತ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು, ರಕ್ತದಾನ ಮಾಡುವುದರಿಂದ ನಮ್ಮ ಆರೋಗ್ಯವೂ ಸುಧಾರಣೆಯಾಗುತ್ತದೆ. ಲವಲವಿಕೆಯಿಂದ ಇರಲು ಸಾಧ್ಯವಾಗುತ್ತದೆ. ಇನ್ನೊಬ್ಬರ ಪ್ರಾಣ ಉಳಿಸಿದ ತೃಪ್ತಿ ಲಭಿಸುತ್ತದೆ ಎಂದರು.

ನೆಹರು ರಸ್ತೆ ವರ್ತಕರ ಸಂಘದ ಕಾರ್ಯದರ್ಶಿ ಎಂ.ಆರ್.ಸುರೇಶ್, ನಿರ್ದೇಶಕ ಆರ್.ಗಿರೀಶ್, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯಕುಮಾರ್, ರಕ್ತದಾನಿ ದಿನಕರ್, ಮಧುಸೂದನ್ ಹಾಗೂ ವರ್ತಕರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net