ರಾಜ್ಯಪಾಲರ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ತೆರೆದ ದುಷ್ಕರ್ಮಿಗಳು

cybe crime
Published on

ಬೆಂಗಳೂರು: ಅಪರಿಚಿತ ವ್ಯಕ್ತಿಯೊಬ್ಬ ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋತ್ ಅವರ ಹೆಸರು ಮತ್ತು ಫೋಟೋ ಬಳಸಿಕೊಂಡು ನಕಲಿ ಫೇಸ್‌ಬುಕ್ ಖಾತೆ ತೆರೆದಿದ್ದು, ಈ ಬಗ್ಗೆ ರಾಜಭವನದ ವಿಶೇಷ ಕಾರ್ಯದರ್ಶಿ ಸಿಟಿ ಸೈಬರ್ ಕ್ರೈಂ ಫೋಲಿಸ್ ಠಾಣೆಗೆ ದೂರು ನೀಡಿದ್ದಾರೆ.
ರಾಜ್ಯಪಾಲರ ಹೆಸರಿನಲ್ಲಿ ನಕಲಿ ಖಾತೆ ತೆರೆದು ದುರುಪಯೋಗಪಡಿಸಿಕೊಳ್ಳುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಬೇಕೆಂದು ರಾಜಭವನದ ವಿಶೇಷ ಕಾರ್ಯದರ್ಶಿ ಪ್ರಭುಶಂಕರ್ ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಈ ಬಗ್ಗೆ ಎ್ಐಆರ್ ದಾಖಲಿಸಿಕೊಂಡಿರುವ ಸೈಬರ್ ಕ್ರೈಂ ಠಾಣೆ ಪೊಲೀಸರು ಆರೋಪಿಗಾಗಿ ಶೋಧ ಕೈಗೊಂಡಿದ್ದಾರೆ.
ರಾಜ್ಯಪಾಲರ ಹೆಸರಿನಲ್ಲಿ ನಕಲಿ ಖಾತೆ ತೆರೆದಿರುವ ಉದ್ದೇಶವೇನು? ಇದರಿಂದ ಯಾರಿಗಾದರೂ ತೊಂದರೆಯಾಗಿದೆಯೇ? ಎಂಬುದರ ಬಗ್ಗೆ ಫೋಲಿಸರು ತನಿಖೆ ಕೈಗೊಂಡು ಮಾಹಿತಿ ಕಲೆ ಹಾಕುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೂರು ದಾಖಲಾಗುತ್ತಿದ್ದಂತೆ ಸೈಬರ್ ಪೊಲೀಸರು ನಕಲಿ ಖಾತೆಯನ್ನು ಕ್ಲೋಸ್ ಮಾಡಿಸಿದ್ದು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net