ರಜೆ ವಿಸ್ತರಣೆ ಇಲ್ಲ ಡಿಸಿ ಸ್ಪಷ್ಟನೆ: ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಫೇಕ್ ಸುದ್ದಿ

IMG-20230726-WA0031
Published on

ಕಲಬುರಗಿ : ಭಾರಿ‌ ಮಳೆ ಹಿನ್ನೆಲೆಯಲ್ಲಿ
ಜುಲೈ 26 ರಿಂದ‌ 29ರ ವರೆಗೆ ಕಲಬುರಗಿ ಜಿಲ್ಲೆಯಾದ್ಯಂತ ಶಾಲೆ ಮತ್ತು ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳ ಆದೇಶದ‌ ಪ್ರತಿ (Fake) ವಾಟ್ಸ್ಯಾಪ್‌ನಲ್ಲಿ ಹರಿದಾಡುತ್ತಿದೆ.

ಇದು ಸುಳ್ಳು ಸುದ್ದಿಯಾಗಿದ್ದು, ಈ ಕುರಿತು ಜಿಲ್ಲಾಧಿಕಾರಿಗಳ ಕಚೇರಿಯಿಂದ ಯಾವುದೇ ಆದೇಶ ಹೊರಡಿಸಿಲ್ಲ ಎಂದು ಈ ಮೂಲಕ ಸ್ಪಷ್ಟಪಡಿಸಿದೆ. ಹೀಗಾಗಿ ಗುರುವಾರ ಎಂದಿನಂತೆ ಶಾಲೆಗಳು ನಡೆಯಲಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net