ರಸಪ್ರಶ್ನೆ ಸ್ಪರ್ಧೆಯಲ್ಲಿ ಸಾಧನೆ

2525
Published on

ಬೆಳಗಾವಿ: ರಾಷ್ಟ್ರೀಯ ವಿಜ್ಞಾನ ದಿನದ ಅಂಗವಾಗಿ ಬೆಳಗಾವಿಯ ಭರತೇಶ ಕಾಲೇಜ್ ವತಿಯಿಂದ ವಿದ್ಯಾರ್ಥಿಗಳಿಗೆ ಗುರುವಾರ ವಿಜ್ಞಾನ ಹಾಗೂ ಗಣಿತ ರಸಪ್ರಶ್ನೆ ಹಾಗೂ ಚಿತ್ರಕಲೆ, ಪರಿಸರ ಸಂರಕ್ಷಣೆ ಕುರಿತು ಚರ್ಚಾ ಸ್ಪರ್ಧೆ ಆಯೋಜಿಸಲಾಗಿತ್ತು. ಸ್ಪರ್ಧೆಯಲ್ಲಿ ನಗರದ ಅನೇಕ ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಅಂತಿಮವಾಗಿ ಕಿಲ್ಲಾ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನಂ-13ರ ವಿದ್ಯಾರ್ಥಿಗಳು ವಿಜ್ಞಾನ ಹಾಗೂ ಗಣಿತ ರಸಪ್ರಶ್ನೆ ಸ್ಪರ್ಧೆಯಲ್ಲಿ ಪ್ರಥಮ ಹಾಗೂ ಪರಿಸರ ಸಂರಕ್ಷಣೆ ಹಾಗೂ ಚಿತ್ರಕಲೆಯಲ್ಲಿ ದ್ವಿತೀಯ ಸ್ಥಾನ ಪಡೆದರು. ವಿದ್ಯಾರ್ಥಿಗಳಿಗೆ ಗಣಿತ ಶಿಕ್ಷಕಿ ಎಸ್.ಬಿ.ಹಿರೇಮಠ ಅವರು ಮಾರ್ಗದರ್ಶನ ನೀಡಿದ್ದರು. ವಿದ್ಯಾರ್ಥಿಗಳ ಸಾಧನೆಗೆ ಶಾಲೆಯ ಮುಖ್ಯಶಿಕ್ಷಕ ದುಂಡಯ್ಯ ಪೂಜೇರ ಹಾಗೂ ಇತರೆ ಆಡಳಿತ ಮಂಡಳಿ ಸಿಬ್ಬಂದಿ ಅಭಿನಂದಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net