ರಸ್ತೆ ಅಭಿವೃದ್ಧಿಗೆ ಒತ್ತು

04 TKE 1 (MLA)
ತರೀಕೆರೆಯಲ್ಲಿ ರಸ್ತೆ ಕಾಮಗಾರಿಗೆ ಶಾಸಕ ಜಿ.ಎಚ್.ಶ್ರೀನಿವಾಸ್ ಗುದ್ದಲಿಪೂಜೆ ನೆರವೇರಿಸಿದರು. ವಸಂತ್‌ಕುಮಾರ್, ಪಾರ್ವತಮ್ಮ, ಅನಿಲ್‌ಕುಮಾರ್, ಯು.ಎಚ್.ಾರೂಕ್, ಟಿ.ದಾದಾಪೀರ್, ಆರ್.ಕುಮಾರಪ್ಪ ಇತರರಿದ್ದರು.
Published on

ತರೀಕೆರೆ: ಪಟ್ಟಣದ ಮುಖ್ಯ ರಸ್ತೆ ಸೇರಿ ವಿವಿಧ ವಾರ್ಡ್‌ಗಳ ರಸ್ತೆ ಅಭಿವೃದ್ಧಿಗೆ ಒತ್ತು ನೀಡಲಾಗಿದೆ. 108 ಕೋಟಿ ರೂಪಾಯಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದರು.

ಪಟ್ಟಣದ ಕೋಡಿಕ್ಯಾಂಪ್‌ನ ವಿವಿಧ ವಾರ್ಡ್‌ಗಳಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ನಿಧಿ ಹಾಗೂ ಮಲೆನಾಡು ಪ್ರದೇಶಾಭಿವೃದ್ಧಿ ಯೋಜನೆಯಡಿ 2.30 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸುವ ಕಾಂಕ್ರಿಟ್ ರಸ್ತೆ ಮತ್ತು ಚರಂಡಿ ಕಾಮಗಾರಿಗೆ ಭಾನುವಾರ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದರು.

ಪಟ್ಟಣದಲ್ಲಿ ಒಳ ಚರಂಡಿ ವ್ಯವಸ್ಥೆಗೆ 108 ಕೋಟಿ ರೂ. ವೆಚ್ಚದ ಡಿಪಿಆರ್ ತಯಾರಿಸಿ ಸಂಬಂಧಪಟ್ಟ ಇಲಾಖೆಗೆ ಕಳುಹಿಸಿಕೊಡಲಾಗಿದ್ದು, ಸದ್ಯದಲ್ಲೇ ಒಪ್ಪಿಗೆ ಸಿಗಲಿದೆ. ತಾಲೂಕಿನ ನಂದಿ ಹೊಸಳ್ಳಿಯಲ್ಲಿ ಎಂಯುಎಸ್‌ಎಸ್ ನಿರ್ಮಾಣ ಕಾಮಗಾರಿ ಮುಗಿಯುವ ಹಂತದಲ್ಲಿದ್ದು, ಯರೇಹಳ್ಳಿಯಲ್ಲಿ ಪ್ರಗತಿ ಹಂತದಲ್ಲಿದೆ. ಅದಲ್ಲದೆ ದರ್ಗಾ, ಶಾದಿಮಹಲ್, ಮಸೀದಿಗಳಿಗೆ ಹೆಚ್ಚಿನ ಅನುದಾನ ಕೊಡಿಸಲಾಗಿದೆ ಎಂದರು. ಪುರಸಭೆ ಅಧ್ಯಕ್ಷ ವಸಂತ್‌ಕುಮಾರ್ ಮಾತನಾಡಿ, ಶಾಸಕರ ನೇತೃತ್ವದಲ್ಲಿ ಪಟ್ಟಣ ಸರ್ವಾಂಗೀಣ ಪ್ರಗತಿ ಕಾಣುತ್ತಿರುವುದು ಮಾತ್ರವಲ್ಲ, ಮುಂದೆ ಸ್ಮಾರ್ಟ್‌ಸಿಟಿ ಆಗಿ ಬದಲಾವಣೆಯಾಗಲಿದೆ ಎಂದು ಹೇಳಿದರು. ಪುರಸಭೆ ಉಪಾಧ್ಯಕ್ಷೆ ಪಾರ್ವತಮ್ಮ, ಸ್ಥಾಯಿ ಸಮಿತಿ ಅಧ್ಯಕ್ಷ ಅನಿಲ್‌ಕುಮಾರ್, ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಚ್.ಯು.ಾರೂಕ್, ಪುರಸಭೆ ಸದಸ್ಯರಾದ ಆರ್.ಕುಮಾರಪ್ಪ, ಟಿ.ದಾದಾಪೀರ್, ಟಿ.ಜಿ.ಲೋಕೇಶ್, ಆದಿಲ್‌ಪಾಷಾ, ಎಂ.ಗಿರಿಜಾ, ಕಮಲಾ, ಮಾಜಿ ಅಧ್ಯಕ್ಷ ಟಿ.ಎಸ್.ಪ್ರಕಾಶ್ ವರ್ಮ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net