ರಸ್ತೆ ಅಭಿವೃದ್ಧಿಗೆ ಸೂಕ್ತ ಯೋಜನೆ

23 TKE 2(1) srinivas
ತರೀಕೆರೆ ತಾಲೂಕು ಲಕ್ಕೇನಹಳ್ಳಿ ಗ್ರಾಮದಲ್ಲಿ ಶಾಸಕರ ಪ್ರದೇಶಾಭಿವೃದ್ಧಿ ಅನುದಾನದಲ್ಲಿ 20 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಕಾಂಕ್ರಿಟ್ ರಸ್ತೆ ಕಾಮಗಾರಿಗೆ ಶಾಸಕ ಜಿ.ಎಚ್.ಶ್ರೀನಿವಾಸ್ ಭೂಮಿಪೂಜೆ ನೆರವೇರಿಸಿದರು. ಮಿರ್ಜಾ ಇಸ್ಮಾಯಿಲ್, ಎಚ್.ಆರ್.ಉಮೇಶ್, ಟಿ.ಎನ್.ಜಗದೀಶ್ ಇತರರಿದ್ದರು.
Published on

ತರೀಕೆರೆ: ಕ್ಷೇತ್ರದಲ್ಲಿ ಆದ್ಯತೆ ಅನುಸಾರ ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತಿದೆ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದರು.

ತಾಲೂಕಿನ ಲಕ್ಕೇನಹಳ್ಳಿ ಗ್ರಾಮದಲ್ಲಿ ಶಾಸಕರ ಪ್ರದೇಶಾಭಿವೃದ್ಧಿ ಅನುದಾನದಲ್ಲಿ 20 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಕಾಂಕ್ರಿಟ್ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು. ಈ ಬಾರಿ ಸುರಿದ ಭಾರಿ ಮಳೆಗೆ ಗ್ರಾಮೀಣ ಪ್ರದೇಶದಲ್ಲಿ ರಸ್ತೆಗಳು ಹಾಳಾಗಿವೆ. ಹದಗೆಟ್ಟ ರಸ್ತೆಯಲ್ಲಿ ಓಡಾಡುತ್ತಿರುವ ಜನಸಾಮಾನ್ಯರ ಸಮಸ್ಯೆಯ ಅರಿವಿದೆ. ಸರ್ಕಾರದಿಂದ ಅನುದಾನ ಬಿಡುಗಡೆ ಮಾಡಿಸಿ ಹಂತ ಹಂತವಾಗಿ ಎಲ್ಲ ಗ್ರಾಮಗಳ ರಸ್ತೆ ಅಭಿವೃದ್ಧಿಗೆ ಯೋಜನೆ ರೂಪಿಸಲಾಗುವುದು ಎಂದರು. ಜಿಲ್ಲಾ ಕಾಂಗ್ರೆಸ್ ಸಮಿತಿ ಕಾರ್ಯದರ್ಶಿ ಮಿರ್ಜಾ ಇಸ್ಮಾಯಿಲ್, ಗ್ರಾಪಂ ಸದಸ್ಯ ಎಚ್.ಆರ್.ಉಮೇಶ್, ಕಾಂಗ್ರೆಸ್ ಸೇವಾದಳದ ತಾಲೂಕು ಅಧ್ಯಕ್ಷ ಟಿ.ಎನ್.ಜಗದೀಶ್ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net