ರಸ್ತೆ ತಡೆದು ರೈತರ ಆಕ್ರೋಶ

Raghu_25_Farmers_Protest_@_SBM_Circle (14)
Published on

ಬೆಂಗಳೂರು:

ರೈತ ವಿರೋಧಿ ಕಾಯ್ದೆ ವಿರೋಧಿಸಿ ಅನ್ನದಾತರು ರಾಜ್ಯದ ವಿವಿಧ ಭಾಗಗಳಲ್ಲಿ ಶುಕ್ರವಾರ ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ. ರೈತರಿಗೆ ಕನ್ನಡಪರ ಹೋರಾಟಗಾರರು ಸೇರಿ ಹಲವು ಸಂಘಟನೆಯ ಕಾರ್ಯಕರ್ತರು ಸಾಥ್ ನೀಡಿದರು.
ಬೆಂಗಳೂರು, ಮೈಸೂರು, ಚಾಮರಾಜನಗರ, ಮಂಡ್ಯ, ಮೈಸೂರು, ಹುಬ್ಬಳ್ಳಿ, ಉತ್ತರ ಕನ್ನಡ, ಶಿವಮೊಗ್ಗ, ಚಿತ್ರದುರ್ಗ, ಕಲ್ಬುರ್ಗಿ ದಾವಣಗೆರೆ ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ರೈತರು ರಾಜ್ಯ, ರಾಷ್ಟ್ರೀಯ ಹೆದ್ದಾರಿಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಿ, ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ರೈತರು, ಕಾರ್ಮಿಕರು, ದಲಿತರು, ಐಕ್ಯ ಹೋರಾಟ ಸಮಿತಿ ನೇತೃತ್ವದಲ್ಲಿ 35ಕ್ಕೂ ಹೆಚ್ಚು ಸಂಘಟನೆಗಳು ರಾಜ್ಯದ ವಿವಿಧ ಭಾಗಗಳಲ್ಲಿ ರಸ್ತೆ ತಡೆ, ಜೈಲ್ಬರೋ ನಡೆಸಿದ ಪರಿಣಾಮ ವಾಹನ ಸಂಚಾರಕ್ಕೆ ಅಡ್ಡಿಯಾಯಿತು. ಇದಾದ ಬಳಿಕ ಪೊಲೀಸರು ಪ್ರತಿಭಟನಾ ನಿರತರನ್ನು ವಶಕ್ಕೆ ಪಡೆದು ಪರಿಸ್ಥಿತಿ ನಿಯಂತ್ರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net