ರಾಜರಾಜೇಶ್ವರಿ ನಗರ ಕ್ಷೇತ್ರದ ಮುಖಂಡರ ಜತೆ ಕುಮಾರಸ್ವಾಮಿ ಚರ್ಚೆ -ಮೂವರು ಹೆಸರು ಆಯ್ಕೆ , ವರಿಷ್ಠರ ನಿರ್ಧಾರವೇ ಅಂತಿಮ

Published on

-ಮೂವರು ಹೆಸರು ಆಯ್ಕೆ , ವರಿಷ್ಠರ ನಿರ್ಧಾರವೇ ಅಂತಿಮ

-ಅಭ್ಯರ್ಥಿ ಆಯ್ಕೆಗೆ ಪೂರಕ ಸಮಾಲೋಚನೆ

ರಾಜರಾಜೇಶ್ವರಿ ನಗರ ಕ್ಷೇತ್ರದ ಮುಖಂಡರ ಜತೆ ಕುಮಾರಸ್ವಾಮಿ ಚರ್ಚೆ

ಕಳೆದ ಎರಡು ಚುನಾವಣೆಯಲ್ಲಿ 50-60 ಸಾವಿರಕ್ಕೂ ಹೆಚ್ಚು ಮತ ಜೆಡಿಎಸ್ ಪಡೆದಿತ್ತು.

ಸಭೆಯ ಬಳಿಕ ಮಾತನಾಡಿದ ಎಂಎಲ್‌ಸಿ ಅಪ್ಪಾಜಿಗೌಡ, ಸಾಮಾನ್ಯ ಹಾಗೂ ಪ್ರಾಮಾಣಿಕ ಕಾರ್ಯಕರ್ತರಿಗೆ ಈ ಬಾರಿ ಟಿಕೆಟ್ ಕೊಡಲು ತೀರ್ಮಾನಿಸಲಾಗಿದೆ. ಬೆಂಗಳೂರು ನಗರ ಅಧ್ಯಕ್ಷ ಪ್ರಕಾಶ್, ಆರ್.ಆರ್. ನಗರ ಕ್ಷೇತ್ರದ ಅಧ್ಯಕ್ಷ ಬೆಟ್ಟಸ್ವಾಮಿಗೌಡ, ಜ್ಞಾನಭಾರತಿಯ ಕೃಷ್ಣಮೂರ್ತಿ ಹೆಸರು ಅಂತಿಮವಾಗಿದೆ.ಈ ಮೂವರಲ್ಲಿ ಒಬ್ಬರ ಹೆಸರನ್ನು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡರ ಜತೆ ಚರ್ಚಿಸಿ ಅಂತಿಮಗೊಳಿಸಲು ಸಭೆ ನಿರ್ಧರಿಸಿದೆ ಎಂದರು.

ಮೂವರು ಯಾರು?:

ಕಳೆದ ಚುನಾವಣೆಯಲ್ಲಿ ಜೆಡಿಎಸ್‌ಗೆ ಹೆಚ್ಚು ಮತಬಂದಿವೆ. ಪಕ್ಷದ ಕಾರ್ಯಕರ್ತರು, ಮುಖಂಡರು ಒಗ್ಗಟ್ಟಿನಿಂದ ಕೆಲಸ ಮಾಡಿದರೆ ಕ್ಷೇತ್ರವನ್ನು ಗೆಲ್ಲಬಹುದು. ಈ ನಿಟ್ಟಿನಲ್ಲಿ ನಿಮ್ಮೆಲ್ಲರ ಪ್ರಯತ್ನ ಇರಬೇಕು ಎಂದು ಹೇಳಿದರು.

ಜೆಡಿಎಸ್ ಶಿರಾ ಕ್ಷೇತ್ರದ ಅಭ್ಯರ್ಥಿ ಆಯ್ಕೆಗೆ ಸಂಬಂಧಿಸಿದಂತೆ ಈಗಾಗಲೇ ಹಲವು ಸಭೆಗಳನ್ನು ನಡೆಸಿ ಮುಖಂಡರಲ್ಲಿ ಒಮ್ಮತ ಮೂಡಿಸುವ ಪ್ರಯತ್ನ ನಡೆಸಿದೆ. ಅದರ ಬೆನ್ನಲ್ಲೇ ಆರ್.ಆರ್.ನಗರ ಕ್ಷೇತ್ರದ ಅಭ್ಯರ್ಥಿ ಆಯ್ಕೆಗೆ ಸಂಬಂಧಿಸಿದಂತೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ತಮ್ಮ ಜೆ.ಪಿ.ನಗರ ನಿವಾಸದಲ್ಲಿ ಕ್ಷೇತ್ರದ ಮುಖಂಡರ ಸಭೆ ನಡೆಸಿದರು. ಪಕ್ಷದ ಅನೇಕ ಮುಖಂಡರನ್ನು ಕರೆಸಿ ಅವರಿಂದ ಅಭಿಪ್ರಾಯ ಪಡೆದುಕೊಂಡರು. ಯಾರಿಗೇ ಟಿಕೆಟ್ ಕೊಟ್ಟರೂ ಅಸಮಾಧಾನದ ಲವಲೇಶವೂ ಇಲ್ಲದೆ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.

ರಾಜರಾಜೇಶ್ವರಿನಗರ ಉಪ ಉಪಚುನಾವಣೆ ರಂಗೇರುತ್ತಿದೆ. ರಾಜಕೀಯ ಪಕ್ಷಗಳು ಅಭ್ಯರ್ಥಿ ಆಯ್ಕೆ ಸೇರಿದಂತೆ ಬಿರುಸಿನ ಚಟುವಟಿಕೆ ನಡೆಸಿವೆ.

ವಿಜಯವಾಣಿ ಸುದ್ದಿಜಾಲ ಬೆಂಗಳೂರು

ಎರಡು ರಾಷ್ಟ್ರೀಯ ಪಕ್ಷಗಳ ಬಗ್ಗೆ ಜನರು ಭ್ರಮನಿರಸರಾಗಿದ್ದಾರೆ. ಹಾಗಾಗಿ ಈ ಬಾರಿ ಜೆಡಿಎಸ್ ಗೆಲ್ಲುವ ಅವಕಾಶ ಹೆಚ್ಚಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net