ರಾಜ್ಯ ಪ್ಯಾರಾ ಈಜು: ಎಸ್.ಬಿ.ಮೋಹಿತ್ ಮೂರು ಚಿನ್ನದ ಪದಕ

14
Published on

ಮೈಸೂರು: ರಾಜ್ಯ ಪ್ಯಾರಾ ಈಜು ಚಾಂಪಿಯನ್ ಶಿಪ್‌ನಲ್ಲಿ ಮೈಸೂರಿನ ಎಸ್.ಬಿ.ಮೋಹಿತ್ ಮೂರು ಚಿನ್ನದ ಪದಕವನ್ನು ಪಡೆದು ಗಮನ ಸೆಳೆದಿದ್ದಾರೆ.

ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿರುವ ದೀನ್ಸ್ ಸ್ವಿಮ್ ಅಕಾಡೆಮಿಯಲ್ಲಿ ಇತ್ತೀಚೆಗೆ ನಡೆದ ಈಜು ಸ್ಪರ್ಧೆಯಲ್ಲಿ ಮೋಹಿತ್ 100 ಮತ್ತು 50 ಮೀ. ಫ್ರೀ ಸ್ಟೈಲ್ ಹಾಗೂ 50 ಮೀ. ಬ್ಯಾಕ್‌ಸ್ಟ್ರೋಕ್‌ನಲ್ಲಿ ಚಿನ್ನದ ಪದಕ ಪಡೆದಿದ್ದಾರೆ.

ಮೈಸೂರಿನ ಜೆ.ಪಿ.ನಗರದಲ್ಲಿರುವ ಜಿ.ಎಸ್.ಎ. ಈಜುಕೊಳದಲ್ಲಿ ತರಬೇತಿಯನ್ನು ಪಡೆಯುತ್ತಿದ್ದಾರೆ. ಈ ಸಾಧನೆಯ ಮೂಲಕ ಮುಂದಿನ ತಿಂಗಳು ಹೈದರಾಬಾದ್‌ನಲ್ಲಿ ನಡೆಯಲಿರುವ 25ನೇ ರಾಷ್ಟ್ರೀಯ ಪ್ಯಾರಾ ಈಜು ಚಾಂಪಿಯನ್ ಶಿಪ್‌ನಲ್ಲಿ ಕರ್ನಾಟಕವನ್ನು ಪ್ರತಿನಿಧಿಸುವ ಅವಕಾಶವನ್ನು ಪಡೆದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net