ರಾಜ್ಯ ಮಟ್ಟಕ್ಕೆ ಆಯ್ಕೆ

ರಾಜ್ಯ ಮಟ್ಟಕ್ಕೆ ಆಯ್ಕೆ
Published on

ಹೊಳೆನರಸೀಪುರ: ತಾಲ್ಲೂಕಿನ ದೊಡ್ಡಕಾಡನೂರು ಗ್ರಾಮದ ಜೆಎಸ್‌ಎಸ್ ಸಂಯುಕ್ತ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಇತ್ತೀಚಿಗೆ ಹಾಸನ ಜಿಲ್ಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ವಿಜೇತರಾಗಿದ್ದು, ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. 

    ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ದ್ವಿತೀಯ ಪಿಯುಸಿ ಕಲಾ ವಿಭಾಗದ ಹೇಮಂತ ಡಿ ಟಿ ಉದ್ದ ಜಿಗಿತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಹಾಗೂ ಮೊತ್ತೊಬ್ಬ ವಿದ್ಯಾರ್ಥಿನಿ ಚಂದ್ರಿಕಾ ಡಿ ಎ ಹರ್ಡಲ್ಸ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇಬ್ಬರೂ ವಿದ್ಯಾರ್ಥಿಗಳನ್ನು ಸಂಸ್ಥೆಯ ಪರವಾಗಿ ಪ್ರಾಂಶುಪಾಲರು ದೈಹಿಕ ಶಿಕ್ಷಣ ಶಿಕ್ಷಕರು ಹಾಗು ಸಿಬ್ಬಂದಿ ವರ್ಗ ಅಭಿನಂದನೆ ಸಲ್ಲಿಸಿದ್ದಾರೆ. 

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net