ರಾಜ್ಯ ಮಟ್ಟದ ದಸರಾ ಯೋಗಾಸನ ಸ್ಫರ್ಧೆ-2025

yoga
Published on

ಕರ್ನಾಟಕ ಸರ್ಕಾರ, ಜಿಲ್ಲಾಡಳಿತ, ನಾಡಹಬ್ಬ ಮೈಸೂರು ದಸರಾ ಮಹೋತ್ಸವ -2025 ಯೋಗ ದಸರಾ ಉಪ ಸಮಿತಿಯ ವತಿಯಿಂದ ರಾಜ್ಯ ಮಟ್ಟದ ದಸರಾ ಯೋಗಾಸನ ಸ್ಪರ್ಧೆ-2025 ನ್ನು ಸೆಪ್ಟೆಂಬರ್ 27 ರಂದು ಬೆಳಗ್ಗೆ 09 ಗಂಟೆಗೆ ಮೈಸೂರು ದಸರಾ ವಸ್ತು ಪ್ರದರ್ಶನ ಪ್ರಾಧಿಕಾರದ ಪಿ. ಕಾಳಿಂಗರಾವ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

 ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯನವರು, ಉಕ್ಕು ಮತ್ತು ಬೃಹತ್ ಕೈಗಾರಿಕಾ ಕೇಂದ್ರ ಸಚಿವರಾದ ಹೆಚ್.ಡಿ ಕುಮಾರಸ್ವಾಮಿ ಉಪ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್, ಹಾಗೂ ಪಶು ಸಂಗೋಪನೆ ಮತ್ತು ರೇಷ್ಮೆ ಇಲಾಖೆ ಸಚಿವರಾದ ಕೆ.ವೆಂಕಟೇಶ್ ಅವರ ಘನ ಉಪಸ್ಥಿತಿಯಲ್ಲಿ, ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಡಾ. ಹೆಚ್.ಸಿ ಮಹದೇವಪ್ಪ ಅವರು ಉದ್ಘಾಟಣೆ ಮಾಡಲಿದ್ದು, ಕೃಷ್ಣರಾಜ ಕ್ಷೇತ್ರದ ವಿಧಾನಸಭಾ ಶಾಸಕರಾದ ಟಿ.ಎಸ್.ಶ್ರೀವತ್ಸ ಅವರು ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.

 ಅರಣ್ಯ ವಸತಿ ಮತ್ತು ವಿಹಾರ ಧಾಮಗಳ ನಿಗಮದ ಅಧ್ಯಕ್ಷರು ಹಾಗೂ ಹೆಚ್.ಡಿ ಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಅನಿಲ್ ಕುಮಾರ್.ಸಿ., ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್ ಲಿಮಿಟೆಡ್ ನ ಅಧ್ಯಕ್ಷರು ಹಾಗೂ ಚಾಮರಾಜನಗರ ವಿಧಾನ ಸಭೆಯ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ, ಚಾಮುಂಡೇಶ್ವರಿ ವಿದ್ಯುತ್ ನಿಗಮ ನಿಯಮಿತದ ಅಧ್ಯಕ್ಷರಾದ ಎ.ಬಿ. ರಮೇಶ್ ಬಂಡಿ ಸಿದ್ದೇಗೌಡ, ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಡಾ. ಪುಷ್ಪ ಅಮರನಾಥ್ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಮಾನಸ ಅವರು ಗೌರವ ಉಪಸ್ಥಿತರಿರಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net