ರಾಜ್ಯ ಹಾಗೂ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆ ಮಮತ(ಪ್ರ), ಗಿರೀಶ್(ದ್ವಿ), ಶೋಭಿತಾ ಅನ್ವೇಕರ್ ಮತ್ತು ವೀಣಾ ವರ್ಣೇಕರ್ (ತೃ)

WhatsApp Image 2020-12-03 at 2.27.21 PM
Published on

ಸುದ್ದಿಗೋಷ್ಠಿಯಲ್ಲಿ ಸಿರಿಗನ್ನಡ ವೇದಿಕೆಯ ಕಾರ್ಯದರ್ಶಿ ಬೊಳ್ಳಜೀರ ಅಯ್ಯಪ್ಪ, ಪ್ರಮುಖರಾದ ಡಾ. ಸೋಮಣ್ಣ ಹಾಗೂ ಪ್ರೊ. ಕಾಳೇಗೌಡ ನಾಗವಾರ ಉಪಸ್ಥಿತರಿದ್ದರು.

ಬಹುಮಾನ ವಿಜೇತರಿಗೆ ಪ್ರಶಂಸಾಪತ್ರದೊಂದಿಗೆ ಪುಸ್ತಕವನ್ನು ಉಡುಗೊರೆಯಾಗಿ ಅಂಜೆ ಮೂಲಕ ನೀಡಲಾಗುತ್ತದೆ. ಮಡಿಕೇರಿಯ ಅರುಣ್ ಸ್ಟೋರ್ಸ್‌ ಮತ್ತು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಲೋಕೇಶ್ ಸಾಗರ್ ಪುಸ್ತಕಗಳನ್ನು ಕೊಡುಗೆಯಾಗಿ ನೀಡಿದ್ದಾರೆ. ರಾಜ್ಯಮಟ್ಟದ ವಿಜೇತರು ಹಾಗೂ ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲರಿಗೂ ಮೈಸೂರಿನ ಲಡಾಯಿ ಪ್ರಕಾಶನದಿಂದ ಖರೀದಿಸಿದ ಪುಸ್ತಕವನ್ನು ಸಿರಿಗನ್ನಡ ವೇದಿಕೆಯಿಂದ ಬಹುಮಾನವಾಗಿ ನೀಡಲಾಗುತ್ತದೆ ಎಂದರು.

ಸಿರಿಗನ್ನಡ ವೇದಿಕೆ ವತಿಯಿಂದ ಕನ್ನಡ ಸಾಹಿತ್ಯ, ಸಂಸ್ಕೃತಿ ಸಂಬಂಧ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬರಲಾಗುತ್ತಿತ್ತು. ಆದರೆ, ಈ ಬಾರಿ ಕರೊನಾ ಮಾರ್ಗಸೂಚಿಯಿಂದಾಗಿ ಆನ್‌ಲೈನ್‌ನಲ್ಲಿ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ದ್ರಾವಿಡ ಕನ್ನಡ ಪೂರ್ವೋತ್ತರಗಳು ಎಂಬ ವಿಷಯದಲ್ಲಿ ನಡೆದ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಮಮತ ಪ್ರಥಮ, ಮಂಗಳೂರಿನ ಗಿರೀಶ್ ದ್ವಿತೀಯ, ಉತ್ತರ ಕನ್ನಡ ಜಿಲ್ಲೆಯ ಶೋಭಿತಾ ಅನ್ವೇಕರ್ ಹಾಗೂ ವೀಣಾ ವರ್ಣೇಕರ್ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಮಡಿಕೇರಿ: ಕೊಡಗು ಸಿರಿಗನ್ನಡ ವೇದಿಕೆ ವತಿಯಿಂದ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಆಯೋಜಿಸಿದ್ದ ರಾಜ್ಯ ಹಾಗೂ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯ ವಿಜೇತರನ್ನು ಆಯ್ಕೆ ಮಾಡಲಾಗಿದ್ದು, ಬಹುಮಾನವನ್ನು ಅಂಚೆ ಮೂಲಕ ಕಳುಹಿಸಿಕೊಡಲಾಗುತ್ತದೆ ಎಂದು ವೇದಿಕೆ ಅಧ್ಯಕ್ಷ ಅಲ್ಲಾರಂಡ ವಿಠಲ್ ನಂಜಪ್ಪ ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net