ರಾಜ್ಯದ 243 ಕಡೆ ಕರೊನಾ ಲಸಿಕೆ ವಿತರಣೆ

Published on


-ಆರೋಗ್ಯ ಸಚಿವ ಡಾ.ಕೆ.ಸುಧಾಕರ್
-237 ಕಡೆ ಕೋವಿಶೀಲ್ಡ್, 6 ಕಡೆ ಕೋವ್ಯಾಕ್ಸಿನ್
-ಬೆಂಗಳೂರಿನಲ್ಲಿ ಲಸಿಕೆ ವಿತರಣೆಗೆ ಪ್ರಧಾನಿ ಚಾಲನೆ
-8,14,500 ಡೋಸ್ ಲಭ್ಯ

ಬೆಂಗಳೂರು ಮೆಡಿಕಲ್ ಕಾಲೇಜಿನಲ್ಲಿ ಶನಿವಾರ ಪ್ರಧಾನಿ ನರೇಂದ್ರ ಮೋದಿಯವರು ಲಸಿಕೆ ವಿತರಣೆಗೆ ಚಾಲನೆ ನೀಡಲಿದ್ದಾರೆ. ಬೆಂಗಳೂರು ಒಂದರಲ್ಲೇ 10 ಆಸ್ಪತ್ರೆಗಳಲ್ಲಿ ಲಸಿಕೆ ನೀಡಲಾಗುವುದು. ಸೇಂಟ್ ಜಾನ್ಸ್ ಮೆಡಿಕಲ್ ಕಾಲೇಜು ಸೇರಿದಂತೆ ಖಾಸಗಿ ಆಸ್ಪತ್ರೆಗಳಲ್ಲೂ ನೀಡಲಾಗುವುದು. ಕೋವಿಶೀಲ್ಡ್ ಲಸಿಕೆಯನ್ನು ರಾಜ್ಯದ 237 ಕೇಂದ್ರ ಹಾಗೂ ಕೋವ್ಯಾಕ್ಸಿನ್ ಲಸಿಕೆಯನ್ನು ಬಳ್ಳಾರಿ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಚಾಮರಾಜನಗರ, ದಾವಣಗೆರೆ ಕೇಂದ್ರಗಳಲ್ಲಿ ನೀಡಲಾಗುವುದು ಎಂದು ಹೇಳಿದರು.

ಕರೊನಾ ಲಸಿಕೆ ವಿತರಣೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಸಿಇಒ, ಜಿಲ್ಲಾ ಆರೋಗ್ಯಾಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸಚಿವರು ಸುದ್ದಿಗಾರರೊಂದಿಗೆ ಮಾತನಾಡಿದರು.

ರಾಜ್ಯದ 243 ಕಡೆಗಳಲ್ಲಿ ಶನಿವಾರ ಕರೊನಾ ಲಸಿಕೆ ನೀಡುತ್ತಿದ್ದು, ಬೆಂಗಳೂರಿನಲ್ಲಿ ಮೆಡಿಕಲ್ ಕಾಲೇಜು ಸೇರಿದಂತೆ 10 ಕಡೆಗಳಲ್ಲಿ ಲಸಿಕೆ ನೀಡಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ವಿಜಯವಾಣಿ ಸುದ್ದಿಜಾಲ ಬೆಂಗಳೂರು

ಲಸಿಕೆ ನೀಡಲು ಮೊದಲಿಗೆ ಜನಪ್ರತಿನಿಧಿಗಳನ್ನೇ ಆರಿಸಬಹುದಿತ್ತು. ಆದರೆ, ಕರೊನಾ ನಿಯಂತ್ರಣಕ್ಕೆ ಶ್ರಮಿಸುತ್ತಿರುವವರಿಗೆ ಮೊದಲ ಪ್ರಾಶಸ್ತ್ಯದಲ್ಲಿ ಲಸಿಕೆ ನೀಡಲಾಗುತ್ತಿದೆ. ಬಳಿಕ ಇತರೆ ರೋಗಗಳಿಂದ ಬಳಲುವವರಿಗೆ ಲಸಿಕೆ ನೀಡಲಾಗುವುದು ಎಂದರು.

ಕರೊನಾ ವಾರಿಯರ್ಸ್‌ಗೆ ಪ್ರಾಶಸ್ತ್ಯ:

ಲಸಿಕೆಯಿಂದ ಅಡ್ಡಪರಿಣಾಮ ಉಂಟಾದರೆ, ಸ್ಥಳದಲ್ಲೇ ತುರ್ತು ಚಿಕಿತ್ಸೆ ವ್ಯವಸ್ಥೆ ಇದೆ. ಸಾಮಾಜಿಕ ಜಾಲತಾಣಗಳಲ್ಲಿ ತಪ್ಪು ಮಾಹಿತಿ ಹರಡಿ ಜನಸಾಮಾನ್ಯರನ್ನು ತಪ್ಪು ದಾರಿಗೆ ಎಳೆಯಲಾಗುತ್ತಿದೆ. ಸರ್ಕಾರದ ಸಾಮಾಜಿಕ ಜಾಲತಾಣಗಳಿಂದ ಬಿಡುಗಡೆ ಮಾಡುವ ಮಾಹಿತಿ ಮಾತ್ರ ಅಧಿಕೃತ ಹಾಗೂ ಸತ್ಯ ಎಂದು ಸ್ಪಷ್ಟಪಡಿಸಿದರು.

ಸರ್ಕಾರಿ ಮಾಹಿತಿ ಮಾತ್ರ ನಂಬಿ:

7,17,439 ಆರೋಗ್ಯ ಸಿಬ್ಬಂದಿಗೆ ಲಸಿಕೆ ನೀಡಲಾಗುತ್ತದೆ. ಮೊದಲ ದಿನ 24,300 ಮಂದಿಗೆ ನೀಡುವ ಗುರಿ ಇದೆ. ನಮ್ಮಲ್ಲಿ ಒಟ್ಟು 8,14,500 ಡೋಸ್ ಲಸಿಕೆ ಲಭ್ಯವಿದ್ದು, ಒಂದು ವಾರದೊಳಗೆ ಮೊದಲ ಹಂತದ ವಿತರಣೆ ಪ್ರಕ್ರಿಯೆ ಮುಗಿಯುವ ಸಾಧ್ಯತೆ ಇದೆ ಎಂದು ತಿಳಿಸಿದರು.

ಮೊದಲ ದಿನ 24,300 ಮಂದಿಗೆ ಲಸಿಕೆ:

-ಮೊದಲ ಡೋಸ್ ಪಡೆದ 28 ದಿನಗಳ ನಂತರ 2ನೇ ಡೋಸ್ ನೀಡಲಾಗುತ್ತದೆ. ಜನರು ಯಾವುದೇ ಆತಂಕವಿಲ್ಲದೆ ವಿಶ್ವಾಸದಿಂದ ಲಸಿಕೆ ಪಡೆಯಿರಿ.

-ಮೊದಲ ಹಂತದಲ್ಲಿ ಆರೋಗ್ಯ ಸಿಬ್ಬಂದಿ, ಪೊಲೀಸರು, ಪೌರಕಾರ್ಮಿಕರು ಹೆಸರು ನೋಂದಾಯಿಸಿಕೊಂಡಿದ್ದಾರೆ.

ಸಚಿವರು ಹೇಳಿದ ಇತರೆ ಅಂಶಗಳು:

ಬಾಕ್ಸ್:

-ರಾಜ್ಯದಲ್ಲಿ 10 ವಾಕ್-ಇನ್ ಕೂಲರ್, 4 ವಾಕ್-ಇನ್ ಫ್ರೀಜರ್, 3,210 ಐಎಲ್ಆರ್, 3,312 ಕೋಲ್ಡ್ ಬಾಕ್ಸ್, 46,591 ಲಸಿಕೆ ಕ್ಯಾರಿಯರ್, 2,25,749 ಐಸ್ ಪ್ಯಾಕ್ ಇದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net