ರಾಜ್ಯದ ವಿವಿಧೆಡೆ ವಸ್ತುಪ್ರದರ್ಶನ

k
Published on

ಮೈಸೂರು ಮಾತ್ರವಲ್ಲದೆ ರಾಜ್ಯದ ವಿವಿಧೆಡೆ ವಸ್ತುಪ್ರದರ್ಶನ ಆಯೋಜಿಸಲು ನಿರ್ಧರಿಸಲಾಗಿದೆ ಎಂದು ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಅಯೂಬ್ ಖಾನ್ ತಿಳಿಸಿದರು.

ಮೊದಲ ಹಂತದಲ್ಲಿ ಬಳ್ಳಾರಿ, ಬೆಳಗಾವಿ, ದಾವಣಗೆರೆ, ಶಿವಮೊಗ್ಗದಲ್ಲಿ ವಸ್ತು ಪ್ರದರ್ಶನ ಆಯೋಜಿಸಲಾಗುತ್ತದೆ. ಇದೇ 24 ರಂದು ಈ ಸಂಬಂಧ ಬಳ್ಳಾರಿ ಜಿಲ್ಲಾಧಿಕಾರಿಗಳ ಜತೆ ಚೆರ್ಚೆ ನಡೆಸಲಾಗುತ್ತದೆ. 25 ರಂದು ಬೆಳಗಾವಿ ಜಿಲ್ಲಾಧಿಕಾರಿಗಳ ಜತೆ ವಸ್ತು ಪ್ರದರ್ಶನ ಆಯೋಜನೆ ಸಂಬಂಧ ಚರ್ಚೆ ನಡೆಸಲಾಗುತ್ತದೆ ಎಂದರು. ಬಳಿಕ ಹಂತ ಹಂತವಾಗಿ ರಾಜ್ಯದ ಎಲ್ಲೆಡೆ ವಸ್ತು ಪ್ರದರ್ಶನ ಆಯೋಜನೆಗೆ ಚಿಂತಿಸಲಾಗಿದೆ ಎಂದು ಮಾಹಿತಿ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net