

ಚಿತ್ರದುರ್ಗ: ರಾಜ್ಯದಲ್ಲಿ ಅಶಾಂತಿ ಉಂಟು ಮಾಡುವುದು ಬಿಜೆಪಿ ಧ್ಯೇಯವಾಗಿದೆ. ಆ ಪಕ್ಷದವರಿಗೆ ನೀತಿ ನಿಯಮ ಇಲ್ಲ ಎಂದು ಸಣ್ಣ ನೀರಾವರಿ ಸಚಿವ ಎನ್.ಎಸ್.ಭೋಸರಾಜು ಹೇಳಿದರು.
ಮೈಸೂರಿನ ಉದಯಗಿರಿ ಗಲಾಟೆ ಪ್ರಕರಣದ ಕುರಿತಂತೆ ಮಾಜಿ ಸಂಸದ ಪ್ರತಾಪ್‌ಸಿಂಹ ‘ತಾಲಿಬಾನ್ ಸರ್ಕಾರ’ ಎಂದು ನೀಡಿದ್ದಾರೆನ್ನಲಾದ ಹೇಳಿಕೆಗೆ ನಗರದಲ್ಲಿ ಈ ರೀತಿ ಪ್ರತಿಕ್ರಿಯಿಸಿದರು.
ಉದಯಗಿರಿ ಘಟನೆ ಹಿಂದೆ ಸಿದ್ದರಾಮಯ್ಯ ಶ್ರೀರಕ್ಷೆ ಇರುತ್ತದೆ ಎಂಬ ಬಿಜೆಪಿ ನಾಯಕರ ಹೇಳಿಕೆಗೆ ಅಸಮಾಧಾನ ವ್ಯಕ್ತಪಡಿಸಿದ ಅವರು, ಜನಪ್ರತಿನಿಧಿಗಳಾದವರು ಜವಾಬ್ದಾರಿಯಿಂದ ಮಾತನಾಡಬೇಕು. ಬಿಜೆಪಿ ಅಧಿಕಾರಾವಧಿಯಲ್ಲಿ ಏನೆಲ್ಲ ಘಟನೆಗಳಾಗಿವೆ ಎಂಬುದನ್ನು ಶಾಸನಸಭೆಯಲ್ಲಿ ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ ಎಂದರು.