ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು ಏಳು ರಾಜ್ಯಗಳ ಮುಖ್ಯಮಂತ್ರಿ ಗಳೊಂದಿಗೆ ಕರೊನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ನಡೆಸಿದ ವಿಡಿಯೋ ಸಂವಾದದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪಾಲ್ಗೊಂಡು ರಾಜ್ಯದ ಸ್ಥಿತಿಗತಿಯ ಕುರಿತು ಮಾಹಿತಿ ಒದಗಿಸಿದರು.
ಆರೋಗ್ಯ ಸಚಿವ ಬಿ.ಶ್ರೀರಾಮುಲು, ವೈದ್ಯಕೀಯ ಶಿಕ್ಷಣ ಸಚಿವ ಡಾ: ಕೆ.ಸುಧಾಕರ್, ಮುಖ್ಯ ಕಾರ್ಯದರ್ಶಿ ಟಿ. ಎಂ.ವಿಜಯಭಾಸ್ಕರ್, ಮುಖ್ಯ ಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾ: ಇ. ವಿ.ರಾಮನರೆಡ್ಡಿ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.