ಉಡುಪಿ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ "ಜಿಲ್ಲಾಧಿಕಾರಿ ನಡೆ ಗ್ರಾಮದ ಕಡೆ" ಶನಿವಾರ ಉಡುಪಿ ಜಿಲ್ಲೆಯಲ್ಲಿ ರಾಜ್ಯದಲ್ಲೇ ಮೊದಲು ಆರಂಭಗೊಂಡಿತು.
ಜಿಲ್ಲಾಧಿಕಾರಿ ಜಿ.ಜಗದೀಶ್ 15 ನಾಲ್ಕೂರು ಗ್ರಾಮಕ್ಕೆ ಭೇಟಿ ನೀಡಿದರು.ಗ್ರಾಮದ ಮಹಿಳೆಯರಿಂದ ಡಿಸಿ ಅವರಿಗೆ ಪೂರ್ಣಕುಂಭ ಸ್ವಾಗತ ನೀಡಲಾಯಿತು. ಚೆಂಡೆ ನಾದದೊಂದಿಗೆ ಜಿಲ್ಲಾಧಿಕಾರಿ ಅವರನ್ನು ಗ್ರಾಮದ ಸಭಾಂಗಣಕ್ಕೆ ಬರ ಮಾಡಿಕೊಳ್ಳಲಾಯಿತು. ಗ್ರಾಮದ ಸಭಾಂಗಣಕ್ಕೆ ಆಗಮಿಸುವ ಮೊದಲು ಸ್ಥಳೀಯ ನಾಲ್ಕೂರು ಸರ್ಕಾರಿ ಪ್ರೌಢಶಾಲೆಗೆ ತೆರಳಿದ ಜಿಲ್ಲಾಧಿಕಾರಿಗಳು ವಿದ್ಯಾರ್ಥಿಗಳಿಗೆ ಒಂದು ಗಂಟೆ ಪಾಠ ಮಾಡಿದರು. ವಿದ್ಯಾರ್ಥಿಗಳೊಂದಿಗೆ ಸಮಾಲೋಚನೆ ನಡೆಸಿದ ಜಿಲ್ಲಾಧಿಕಾರಿಗಳು. ಸಮಾನ್ಯ ಜ್ಞಾನ ಪ್ರೆಶ್ನೆ. ವಿದ್ಯಾರ್ಥಿಗಳು ಮುಂದೆ ಏನಾಗ ಬಯಸುತ್ತೀರಿ ಎಂದು ಪ್ರೆಶ್ನೆಗಳನ್ನು ಕೇಳಿದರು. ವಿದ್ಯಾರ್ಥಿಗಳು ಉತ್ಸಾಹದಿಂದ ಡಿಸಿ ಪ್ರೆಶ್ನೆಗಳಿಗೆ ಉತ್ತರಿಸಿದರು.
ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಮಾರಾಳಿ ಪ್ರತಾಪ್ ಹೆಗ್ಡೆ, ಎಡಿಸಿ ಸದಾಶಿವ ಪ್ರಭು, ಕುಂದಾಪುರ ಎಸಿ ರಾಜು, ಬ್ರಹ್ಮಾವರ ತಹಸೀಲ್ದಾರ್ ಕಿರಣ್ ಗೋರಯ್ಯ ಉಪಸ್ಥಿತರಿದ್ದರು. ಗ್ರಾಮದ ಕುಂದು ಕೊರತೆ ಸಭೆಯಲ್ಲಿ ನೂರಾರು ಗ್ರಾಮಸ್ಥರು ಕಂದಾಯ ಇಲಾಖೆ ಸೇರಿದಂತೆ, ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.