ರಾಷ್ಟಿçÃಯ ಡೆಂಗ್ಯೂ ದಿನಾಚರಣೆ ಅಂಗವಾಗಿ ಜಾಗೃತಿ ಕರಪತ್ರಗಳ ಬಿಡುಗಡೆ / ಸೊಳ್ಳೆಗಳ ನಿಯಂತ್ರಣಕ್ಕೆ ನಗರಸಭೆಯಿಂದ ಎಲ್ಲಾ ಅಗತ್ಯ ಕ್ರಮ / ಲಕ್ಷಿö್ಮÃದೇವಮ್ಮ

Published on

ವಿಜಯವಾಣಿ ಸುದ್ದಿಜಾಲ ಕೋಲಾರ

ಡೆಂಗ್ಯು ಹರಡಲು ಕಾರಣವಾದ ಸೊಳ್ಳೆಗಳ ನಿಯಂತ್ರಣಕ್ಕೆ ನಗರದಲ್ಲಿ ಎಲ್ಲಾ ಅಗತ್ಯ ಕ್ರಮ ಕೈಗೊಳ್ಳುವುದಾಗಿಯೂ ಮತ್ತು ಆರೋಗ್ಯ ಇಲಾಖೆ ಸಲಹೆಗಳ ಪಾಲನೆ ಮಾಡುವುದಾಗಿ ನಗರಸಭೆ ಅಧ್ಯಕ್ಷ ಲಕ್ಷಿö್ಮÃದೇವಮ್ಮ ತಿಳಿಸಿದರು.

`ಡೆಂಗ್ಯು ಸೋಲಿಸಲು ಹೆಜ್ಜೆಗಳು, ಪರಿಶೀಲಿಸಿ, ಸ್ವಚ್ಚಗೊಳಿಸಿ, ಮುಚ್ಚಿಸಿ ಎಂಬ ಘೋಷವಾಕ್ಯದೊಂದಿಗೆ ಶುಕ್ರವಾರ ನಗರದ ಸ್ಕೌಟ್ಸ್ ಗೈಡ್ಸ್ ಸಭಾಂಗಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪಂಚಾಯತ್ ರಾಜ್ ಇಲಾಖೆಗಳ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ರಾಷ್ಟಿçÃಯ ಡೆಂಗ್ಯೂ ದಿನಾಚರಣೆ ಅಂಗವಾಗಿ ಜಾಗೃತಿ ಕರಪತ್ರವನ್ನು ಬಿಡುಗಡೆಗೊಳಿಸಿ ಮಾತನಾಡುತ್ತಿದ್ದರು.

ಪ್ರತಿಯೊಬ್ಬರು ಸಹ ತಮ್ಮ ಜವಾಬ್ದಾರಿಯನ್ನು ಅರಿತು ರೋಗದಿಂದ ದೂರವಿರಿ. ಮನೆಯಲ್ಲಿ ಇರುವ ನೀರಿನ ತೊಟ್ಟಿಗಳು, ಡ್ರಂಗಳು ಮತ್ತು ಸಿಂಟೆಕ್ಸ್ಗಳನ್ನು ಕನಿಷ್ಠ ವಾರಕ್ಕೆ ಒಂದು ಬಾರಿ ಸ್ವಚ್ಛಗೊಳಿಸಬೇಕು. ಮನೆಯ ಸುತ್ತಮುತ್ತ ಎಸೆದಿರುವ ವಸ್ತುಗಳಲ್ಲಿ ಮಳೆ ನೀರು ಶೇಖರಣೆಯಾಗದಂತೆ ಎಚ್ಚರಿಕೆ ವಹಿಸುವುದು. ಈಡಿಸ್ ಸೊಳ್ಳೆಗಳು ಹಗಲು ಹೊತ್ತಿನಲ್ಲಿ ಕಚ್ಚುವುದರಿಂದ ಹಗಲು ಹೊತ್ತಿನಲ್ಲಿ ವಿಶ್ರಾಂತಿ ಪಡೆಯುವವರು, ವಿಶೇಷವಾಗಿ ಮಕ್ಕಳು, ವೃದ್ಧರು ಹಾಗೂ ಗರ್ಭಿಣಿಯರು ಸೊಳ್ಳೆ ಪರದೆಯನ್ನು ಬಳಸಬೇಕು ಎಂದರು.

ನಗರಸಭಾ ಉಪಾಧ್ಯಕ್ಷೆ ಸಂಗೀತಾ ಮಾತನಾಡಿ, ನಗರ ಮತ್ತು ಗ್ರಾಮೀಣ ಪ್ರದೇಶದ ಕಲ್ಯಾಣಿ, ನೀರಿನ ತಾಣಗಳಲ್ಲಿ ಸೊಳ್ಳೆಗಳ ಸಂತತಿ ನಿಯಂತ್ರಣಕ್ಕೆ ಕ್ರಮವಹಿಸಿ, ಚರಂಡಿಗಳಲ್ಲಿ ನೀರು ಸರಾಗವಾಗಿ ಹರಿದು ಹೋಗುವಂತೆ ಮಾಡಿ, ಜನತೆ ಡೆಂಗ್ಯು ರೋಗ ಲಕ್ಷಣಗಳ ಕುರಿತು ಮಾಹಿತಿ ನೀಡಿ ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು.

ಪೌರಾಯುಕ್ತ ಪ್ರಸಾದ್ ಮಾತನಾಡಿ, ನಗರದಲ್ಲಿ ಸೊಳ್ಳೆಗಳ ಹಾವಳಿ ಹೆಚ್ಚಾಗಿದೆ ಎಂಬ ದೂರು ಇದ್ದು, ಈ ಕುರಿತು ಅಗತ್ಯ ಕ್ರಮವಹಿಸುವುದಾಗಿಯೂ ಮತ್ತು ನಗರದಲ್ಲಿ ಫಾಗಿಂಗ್ ಮಾಡುವ ಕುರಿತು ಸುಳಿವು ನೀಡಿದರು.

ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ರವಿಕುಮಾರ್ ಮಾತನಾಡಿ, `ಡೆಂಗ್ಯು ಸೋಲಿಸಲು ಹೆಜ್ಜೆಗಳು, ಪರಿಶೀಲಿಸಿ, ಸ್ವಚ್ಚಗೊಳಿಸಿ, ಮುಚ್ಚಿಸಿ ಘೋಷವಾಕ್ಯದೊಂದಿಗೆ ಈ ಬಾರಿ ಡೆಂಗ್ಯು ದಿನ ಆಚರಿಸುತ್ತಿದ್ದು, ನಗರಸಭೆ, ಪುರಸಭೆ ಮತ್ತು ಗ್ರಾ.ಪಂಗಳಿAದ ಪ್ರತಿ ಗ್ರಾಮ, ವಾರ್ಡಿನಲ್ಲಿ ವಾರಕ್ಕೊಮ್ಮೆ ಡ್ರೆöÊ ಡೇ ಆಚರಿಸುವ ಮೂಲಕ ಸಮುದಾಯದ ಸಹಭಾಗಿತ್ವದೊಂದಿಗೆ ಡೆಂಗ್ಯು ನಿಯಂತ್ರಿಸಲು ಆರೋಗ್ಯ ಇಲಾಖೆಯೊಂದಿಗೆ ಪಂಚಾಯತ್ ರಾಜ್ ಇಲಾಖೆ, ನಗರಸಭೆ ಸಹಕರಿಸಬೇಕು ಎಂದು ಕೋರಿ ಈ ರೋಗದ ಬಗ್ಗೆ ಜನರಿಗೆ ಅರಿವು ಮೂಡಿಸಲು ಇಲಾಖೆ ಮುಂದಾಗಿದೆ ಎಂದರು.

ಮನುಷ್ಯರಿಗೆ ಆರೋಗ್ಯ ಎಂಬುದು ಮುಖ್ಯವಾಗಿರುತ್ತದೆ. ಇತ್ತೀಚಿನ ದಿನಗಳಲ್ಲಿ ಹೊಸ ಹೊಸ ರೋಗಗಳು ಪತ್ತೆಯಾಗುತ್ತಿದೆ. ಇದರಲ್ಲಿ ಡೆಂಗ್ಯೂ ಜ್ವರವು ಸಹ ಒಂದಾಗಿದ್ದು, ಇದರ ಬಗ್ಗೆ ಪ್ರತಿಯೊಬ್ಬರು ಎಚ್ಚರಿಕೆ ವಹಿಸಬೇಕು ಎಂದು ಮನವಿ ಮಾಡಿದರು.

ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಎ.ವಿ.ನಾರಾಯಣಸ್ವಾಮಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಪ್ರೇಮಾ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ರೇಣುಕಾದೇವಿ, ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಮಹೇಶ್, ಲೋಕೇಶ್, ರಗುಪತಿ ಮತ್ತು ನಗರಸಭೆಯ ಎಲ್ಲಾ ಪೌರಕಾರ್ಮಿಕರು ಹಾಜರಿದ್ದರು.

ಚಿತ್ರ ೧೭ ಕೆ.ಎಲ್.ಆರ್. ೦೨ : ಕೋಲಾರದ ಸ್ಕೌಟ್ಸ್ಗೈಡ್ಸ್÷ ಸಭಾಂಗಣದಲ್ಲಿ ಜಿಲ್ಲಾ ಕುಟುಂಬ ಕಲ್ಯಾಣ ಇಲಾಖೆ, ಪಂಚಾಯತ್ ರಾಜ್ ಇಲಾಖೆಗಳಿಂದ ಹಮ್ಮಿಕೊಂಡಿದ್ದ ರಾಷ್ಟಿçÃಯ ಡೆಂಗ್ಯೂ ದಿನಾಚರಣೆ ಅಂಗವಾಗಿ ಜಾಗೃತಿ ಕರಪತ್ರ ಬಿಡುಗಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ನಗರಸಭೆ ಅಧ್ಯಕ್ಷೆ ಲಕ್ಷಿö್ಮÃದೇವಮ್ಮ, ಉಪಾಧ್ಯಕ್ಷೆ ಸಂಗೀತಾ, ಅಧಿಕಾರಿಗಳಾದ ಡಾ.ರವಿಕುಮರ್, ಡಾ.ಎ.ವಿ.ನಾರಾಯಣಸ್ವಾಮಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net