ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ” ಪ್ರಶಸ್ತಿಗೆ ಅರ್ಜಿ ಆಹ್ವಾನ

Application
Published on

2025ನೇ ಸಾಲಿನ “ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ” ಪ್ರಶಸ್ತಿಗೆ ಅರ್ಹ ಶಿಕ್ಷಕರು/ ಉಪನ್ಯಾಸಕರು/ ಮುಖ್ಯ ಶಿಕ್ಷಕರು/ ಪ್ರಾಂಶುಪಾಲರಿoದ ಆನ್‌ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.

 ಅರ್ಜಿ ಸಲ್ಲಿಸಲು ಭಾರತ ಸರ್ಕಾರದ ಶಿಕ್ಷಣ ಮಂತ್ರಾಲಯ ವ್ಯಾಪ್ತಿಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಆದೇಶಾನುಸಾರ ಅವಕಾಶ ಕಲ್ಪಿಸಿರುವುದರಿಂದ ಶಿಕ್ಷಕರು 2025 ನೇ ಸಾಲಿನ “ರಾಷ್ಟçಮಟ್ಟದ ಉತ್ತಮ ಶಿಕ್ಷಕ” ಪ್ರಶಸ್ತಿಗೆ ಆಯ್ಕೆಯಾಗ ಬಯಸಿ ಅರ್ಜಿ ಸಲ್ಲಸಲು https://nationalawardstoteachers.education.gov.in ವೆಬ್‌ಸೈಟ್‌ನ ಮೂಲಕ ಸ್ವಯಂ ಆನ್‌ಲೈನ್ ಮೂಲಕ ಜುಲೈ 14 ರಿಂದ 20 ರವರೆಗೆ ಅಂತಿಮವಾಗಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿರುವುದರಿಂದ ಸದರಿ ದಿನಾಂಕದೊಳಗೆ ನೋಂದಾಯಿಸಿಕೊoದು ಅರ್ಜಿಗಳನ್ನು ಸಂಬoಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಮೂಲಕ ಉಪನಿರ್ದೇಶಕರು (ಆಡಳಿತ) ಶಾಲಾ ಶಿಕ್ಷಣ ಇಲಾಖೆ ಮೈಸೂರು ಕಛೇರಿಗೆ ಸಲ್ಲಿಸಬಹುದು ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು(ಆಡಳಿತ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net