ರಾಷ್ಟ್ರದ ಬೊಕ್ಕಸಕ್ಕೆ ಬಿಜೆಪಿಯಿಂದ ನಷ್ಟ

Muniyappa 10 Feb 20
Published on

ಚಿತ್ರದುರ್ಗ: ರಾಷ್ಟ್ರದ ಬೊಕ್ಕಸಕ್ಕೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದಿಂದ ನಷ್ಟ ಉಂಟಾಗುತ್ತಿದೆ ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ದೂರಿದರು.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬಿಜೆಪಿ ಮತ್ತೊಮ್ಮೆ ಅಧಿಕಾರ ಪಡೆಯಲು ಮತಗಳಿಕೆ ಉದ್ದೇಶದಿಂದ ಪ್ರತಿ ಕೆ.ಜಿಗೆ 39 ರೂ. ಮೌಲ್ಯವಿರುವ ಅಕ್ಕಿಯನ್ನು 19 ರೂ.ಗೆ ಖರೀದಿಸಿ, ಇನ್ನುಳಿದ 20 ರೂ. ಕೇಂದ್ರ ಸರ್ಕಾರ ಭರಿಸುತ್ತಿದ್ದು, ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಈ ರೀತಿ 10 ಲಕ್ಷ ಟನ್ ಅಕ್ಕಿ ಸಂಗ್ರಹಿಸಿದ್ದು, ಸಾವಿರಾರು ಕೋಟಿ ರೂ. ನಷ್ಟ ಉಂಟಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ದೇಶದೊಳಗೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಇಬ್ಬರೇ ಏಕಚಕ್ರಾಧಿಪತಿಗಳಾಗಿ ಆಡಳಿತ ನಡೆಸುತ್ತಿದ್ದಾರೆ. ಬಿಜೆಪಿ ಜಾತಿ-ಧರ್ಮದ ಹೆಸರಿನಲ್ಲಿ ಕೋಮು ಭಾವನೆ ಸೃಷ್ಟಿಸುತ್ತಿದೆ. ಇದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗಿದೆ. ಸಂವಿಧಾನ ಬದಲಿಸುವ ಚಿಂತನೆ ಹೊಂದಿದೆ ಎಂದು ಆರೋಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net