ರಾಷ್ಟ್ರೀಯ ಲೋಕ್ ಅದಾಲತ್ / ಕೋಲಾರದಲ್ಲಿ ಬಾಕಿ ಇದ್ದ ೫೯೧೯೨ ಪ್ರಕರಣ ಇತ್ಯರ್ಥ / ನ್ಯಾ. ಜಿ.ಎ.ಮಂಜುನಾಥ್

Published on

ವಿಜಯವಾಣಿ ಸುದ್ದಿಜಾಲ ಕೋಲಾರ

ಕೋಲಾರ ಜಿಲ್ಲೆಯ ಎಲ್ಲ ತಾಲೂಕು ಹಾಗೂ ಕಾನೂನು ಸೇವಾ ಸಮಿತಿಗಳ ಆಶ್ರಯದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ೫೯೧೯೨ ಪ್ರಕರಣಗಳು ಇತ್ಯರ್ಥಗೊಂಡಿವೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಜಿ.ಎ.ಮಂಜುನಾಥ್ ತಿಳಿಸಿದರು.

ಬೆಂಗಳೂರು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಕೋಲಾರ ಜಿಲ್ಲೆಯ ಎಲ್ಲಾ ತಾಲೂಕು ಕಾನೂನು ಸೇವಾ ಸಮಿತಿಗಳ ಆಶ್ರಯದಲ್ಲಿ ಜಿಲ್ಲೆಯಾದ್ಯಂತ ಒಟ್ಟೂ ಪೀಠಗಳಲ್ಲಿ ೪೯೦೭೯ವ್ಯಾಜ್ಯ ಪೂರ್ವ ಪ್ರಕರಣಗಳು ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ೧೦೧೧೩ ಪ್ರಕರಣಗಳನ್ನು ಈ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಇತ್ಯರ್ಥ ಮಾಡಲಾಗಿದೆ ಎಂದು ತಿಳಿಸಿದರು.

ಸಾಲ ಮರುಪಾವತಿ, ಪರಿಹಾರ, ದಂಡ ಹಾಗೂ ಇತ್ಯಾದಿ ಹಣಕಾಸಿನ ಪ್ರಕರಣಗಳಿಗೆ ಸಂಬAಧಪಟ್ಟAತೆ ಒಟ್ಟು ರೂಪಾಯಿ ೩೮೧೭೦೭೦೯೦ ಹಣ ಸಂಗ್ರಹ ಮತ್ತು ಪಾವತಿಯಾಗಿದೆ ಎಂದು ಮಾಹಿತಿ ನೀಡಿದರು.

ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಹೆಚ್ಚಿನ ಪ್ರಕರಣಗಳು ರಾಜಿಯಾಗಲು ಸಹಕರಿಸಿದ ಜಿಲ್ಲೆಯ ಎಲ್ಲಾ ನ್ಯಾಯಾಧೀಶರು, ಎಲ್ಲಾ ವಕೀಲರು, ಸರ್ಕಾರಿ ಅಭಿಯೋಜಕರು, ಪೊಲೀಸ್ ಇಲಾಖೆ, ಜಿಲ್ಲಾ ಗ್ರಾಹಕರ ವೇದಿಕೆ, ಕಾರ್ಮಿಕ ಇಲಾಖೆ, ನಗರಸಭೆ ಆಯಕ್ತರು, ಭೂ ಮತ್ತು ಗಣಿ ವಿಜ್ಞಾನ ಇಲಾಖೆ ಅಧಿಕಾರಿಗಳು, ಇತರೆ ಇಲಾಖೆಗಳ ಅಧಿಕಾರಿಗಳು, ನ್ಯಾಯಾಲಯದ ಸಿಬ್ಬಂದಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಿಬ್ಬಂದಿ, ಕಕ್ಷಿದಾರರು, ಮಾಧ್ಯಮ ಪ್ರತಿನಿಧಿಗಳು ಹಾಗೂ ನಗರಸಭೆಯ ಆಯುಕ್ತರಿಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸುನಿಲ್ ಎಸ್ ಹೊಸಮನಿ ಅಭಿನಂದನೆ ಸಲ್ಲಿಸಿದರು.

ಚಿತ್ರ ೧೫ ಕೆ.ಎಲ್.ಆರ್. ೦೬ : ಕೋಲಾರದಲ್ಲಿ ನಡೆದ ರಾಷ್ಟಿçÃಯ ಲೋಕ ಅದಾಲತ್ ಕಾರ್ಯಕ್ರಮವನ್ನು ಉದ್ಘಾಟಿಸಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಜಿ.ಎ.ಮಂಜುನಾಥ್, ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸುನೀಲ್ ಎಸ್.ಹೊಸಮನಿ ಮುಂತಾದವರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net