

ಚಿತ್ರದುರ್ಗ: ಕೇಂದ್ರ ರೇಷ್ಮೆ ಸಂಶೋಧನೆ ಮತ್ತು ತರಬೇತಿ ಸಂಸ್ಥೆ ಮತ್ತು ರಾಜ್ಯ ರೇಷ್ಮೆ ಇಲಾಖೆ ಸಹಯೋಗದಲ್ಲಿ ಡಿ.20ರಂದು ಬೆಳಗ್ಗೆ 10.30ಕ್ಕೆ ನಗರದ ಎಸ್‌ಜಿ ಕಲ್ಯಾಣ ಮಂಟಪದಲ್ಲಿ ರೈಷ್ಮೆ ಕೃಷಿ ಐಸಿರಿಗೆ ದಾರಿ ಎಂಬ ವಿಷಯದೊಂದಿಗೆ ರೇಷ್ಮೆ ಕೃಷಿ ಮೇಳ ಹಮ್ಮಿಕೊಳ್ಳಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಕಾರ್ಯಕ್ರಮ ಹಾಗೂ ರೇಷ್ಮೆ ಸಚಿವ ಕೆ. ವೆಂಕಟೇಶ್ ರೇಷ್ಮೆ ಕೃಷಿ ವಸ್ತು ಪ್ರದರ್ಶನ ಉದ್ಘಾಟಿಸುವರು. ಮುಖ್ಯಅತಿಥಿಯಾಗಿ ಸಂಸದ ಗೋವಿಂದ ಎಂ. ಕಾರಜೋಳ ಭಾಗವಹಿಸುವರು. ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅಧ್ಯಕ್ಷತೆ ವಹಿಸುವರು. ಶಾಸಕರು, ವಿಧಾನ ಪರಿಷತ್ ಸದಸ್ಯರು, ಅಧಿಕಾರಿಗಳು ಮತ್ತಿ ತರರು ಸಮಾರಂಭದಲ್ಲಿ ಭಾಗವಹಿಸುವರು.