ರೈತ ಸಂಘಟನೆಗಿದೆ ಪ್ರಶ್ನೆ ಮಾಡುವ ಎದೆಗಾರಿಕೆ

14BTP01
Published on
  • ಬೆಟ್ಟದಪುರ: ರೈತರು, ಬಡವರಿಗೆ ತೊಂದರೆಯಾದ ಸಂದರ್ಭದಲ್ಲಿ ಸರ್ಕಾರ ಅಥವಾ ಸಂಬಂಧಿಸಿದ ಅಧಿಕಾರಿಗಳನ್ನು ಪ್ರಶ್ನೆ ಮಾಡುವ ಎದೆಗಾರಿಕೆ ರೈತ ಸಂಘಟನೆಗಳಿಗೆ ಇದೆ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಅಧ್ಯಕ್ಷ ಅರಳಾಪುರ ಮಂಜೇಗೌಡ ಹೇಳಿದರು.
    ಗ್ರಾಮದಲ್ಲಿ ಸೋಮವಾರ ಆಯೋಜಿಸಿದ್ದ ರೈತರ ಸಭೆಯಲ್ಲಿ ಮಾತನಾಡಿದ ಅವರು, ಬೆಳೆಗಳಿಗೆ ಸೂಕ್ತ ಬೆಲೆ ಸಿಗದೆ ರೈತರು ಪರಿತಪಿಸುತ್ತಿದ್ದಾರೆ. ಅಲ್ಲದೆ ಸೂಕ್ತ ಬೆಲೆಗಾಗಿ ಸಾಕಷ್ಟು ದಶಕಗಳಿಂದ ಹೋರಾಟ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.
    ಪ್ರತಿ ಮನೆಯಲ್ಲಿ ರೈತ ಸಂಘಟನಾಕಾರರು ಇರಬೇಕು. ಆಗ ಮಾತ್ರ ರೈತರ ಸಮಸ್ಯೆ ಬಗೆಹರಿಯಲು ಸಾಧ್ಯ ಎಂದರು.
    ಸಂಘದ ರಾಜ್ಯ ಉಪಾಧ್ಯಕ್ಷ ಡಾ.ಮಂಜುನಾಥ್, ಜಿಲ್ಲಾಧ್ಯಕ್ಷ ಅಬ್ದುಲ್ ಮಲ್ಲಿಕ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಸುನೀತಾ ರಮೇಶ್, ಜಿಲ್ಲಾ ಗೌರವಾಧ್ಯಕ್ಷ ಅಬ್ದುಲ್ ಶುಕ್ರುಸ್, ಪದಾಧಿಕಾರಿಗಳಾದ ಎಂ.ಡಿ.ದ್ರಾಕ್ಷಾಯಣಿ, ಕೃಷ್ಣೇಗೌಡ, ರಾಮೇಗೌಡ, ಮಹೇಶ್, ಮಹಾದೇವಮ್ಮ, ಕೃಷ್ಣಗೌಡ, ರಫೀಯುಲ್ಲಾ, ಮಂಜುನಾಥ್ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net