ರೈತರಿಗೆ ಅನ್ಯಾಯವಾಗಲು ಬಿಡುವುದಿಲ್ಲ

HUN-JUNE28-1{RAITHA SANGHA HONOUR TO MLA}
ಹುಣಸೂರಿನ ಎಪಿಎಂಸಿ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಶಾಸಕ ಜಿ.ಡಿ.ಹರೀಶ್‌ಗೌಡ ಅವರನ್ನು ಸನ್ಮಾನಿಸಲಾಯಿತು. ರೇವಣ್ಣ, ಶಶಿಧರ್, ನಂಜುಂಡೇಗೌಡ, ಮಂಜಣ್ಣ, ಚಂದ್ರೇಗೌಡ, ಮೀನಾ, ಉಮಾದೇವಿ ಇದ್ದರು.
Published on

ಹುಣಸೂರು: ನನ್ನ ಅಧಿಕಾರಾವಧಿಯಲ್ಲಿ ತಾಲೂಕಿನಲ್ಲಿ ರೈತರಿಗೆ ಯಾವುದೇ ರೀತಿಯಲ್ಲೂ ಅನ್ಯಾಯವಾಗದಂತೆ ಕ್ರಮ ವಹಿಸಲಾಗುವುದು ಎಂದು ಶಾಸಕ ಜಿ.ಡಿ.ಹರೀಶ್‌ಗೌಡ ಭರವಸೆ ನೀಡಿದರು.

ಅಖಂಡ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ನಗರದ ಎಪಿಎಂಸಿ ಆವರಣದಲ್ಲಿ ಬುಧವಾರ ಆಯೋಜಿಸಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ರೈತ ಪದಾಧಿಕಾರಿಗಳಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದರು.

ರೈತಪರ ಕೆಲಸ ಮಾಡುವುದು, ಸರ್ಕಾರದ ಸವಲತ್ತುಗಳನ್ನು ಒದಗಿಸುವುದರ ಹೊರತಾಗಿ ಯಾವುದೇ ಸಂದರ್ಭದಲ್ಲೂ ರೈತರಿಗೆ ಅನ್ಯಾಯವಾಗದಂತೆ ನೋಡಿಕೊಳ್ಳಲಾಗುವುದು ಎಂದರು.

ರೈತರ ಮಗನಾಗಿ ರೈತರ ಸಮಸ್ಯೆ ಅರಿತಿದ್ದು, ಎಪಿಎಂಸಿ ಆವರಣದಲ್ಲಿ ಮೂಲ ಸೌಕರ್ಯ ಕೊರತೆ ನೀಗಿಸಲು ಶೀಘ್ರ ಕ್ರಮ ವಹಿಸಲಾಗುವುದು ಎಂದರು.

110 ಟಿಸಿ ವಿತರಣೆ: ತಾಲೂಕಿನಲ್ಲಿ ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯವಿದ್ದ 110 ಟಿಸಿಗಳನ್ನು ರೈತರಿಗೆ ವಿತರಿಸಲಾಗಿದೆ. ಇನ್ನೂ 40 ಟಿಸಿ ಬೇಡಿಕೆ ಇದ್ದು, ಶೀಘ್ರ ಪೂರೈಸಲಾಗುವುದು ಎಂದರು.

ಸಂಘದ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ನಿಂಗಮ್ಮ ಮಾತನಾಡಿ, ಎಪಿಎಂಸಿಯಲ್ಲಿ ಕ್ಯಾಂಟೀನ್, ರೈತ ಭವನ, ನೀರಿನ ಘಟಕ, ಮಹಿಳೆಯರಿಗೆ ಶೌಚಗೃಹ ನಿರ್ಮಿಸುವಂತೆ ಮನವಿ ಮಾಡಿದರು.

ಇದೇ ವೇಳೆ ಹುಣಸೂರು, ಕೆ.ಆರ್.ನಗರ ತಾಲೂಕಿನ ಸಂಘದ ಪದಾಧಿಕಾರಿಗಳನ್ನು ಅಭಿನಂದಿಸಲಾಯಿತು. ಎಪಿಎಂಸಿ ಅಧ್ಯಕ್ಷ ಸುಭಾಶ್, ರೈತಸಂಘದ ಜಿಲ್ಲಾ ಗೌರವಾಧ್ಯಕ್ಷ ಹೊಸೂರು ಕೃಷ್ಣಕುಮಾರ್, ರಾಜ್ಯಉಪಾಧ್ಯಕ್ಷ ರವಿ ಸಿದ್ದೇಗೌಡ, ಪ್ರಧಾನ ಕಾರ್ಯದರ್ಶಿ ರವಿಸಿದ್ದಯ್ಯ, ಜಿಲ್ಲಾಧ್ಯಕ್ಷ ರೇವಣ್ಣ, ತಾಲೂಕು ಅಧ್ಯಕ್ಷ ಶಶಿಧರ್, ಗೌರವಾಧ್ಯಕ್ಷ ನಂಜುಂಡೇಗೌಡ, ಮಂಜಣ್ಣ, ಚಂದ್ರೇಗೌಡ, ಸಿದ್ದಪ್ಪ, ಕುಮಾರ್, ರೇವಣ್ಣ, ಯೋಗಣ್ಣ, ನಾಗೇಶ್, ಪಾಪಣ್ಣ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net