ರೋಟರಿ ಸೈನಿಕ್ ದೇಶ ರತ್ನ ಪ್ರಶಸ್ತಿ ಪ್ರದಾನ

7
Published on

ರೋಟರಿ ಮೈಸೂರು ಮಿಡ್ ಟೌನ್, ಶ್ರೀ ಸೈನಿಕ್ ಫೌಂಡೇಷನ್ ಸಹಯೋಗದಲ್ಲಿ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಅವರ ಕುಟುಂಬದವರಿಗೆ ‘ರೋಟರಿ ಸೈನಿಕ್ ದೇಶ ರತ್ನ’ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಮುಡಾ ಎದುರಿನ ರೋಟರಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನಿವೃತ್ತ ವಿಂಗ್ ಕಮಾಂಡರ್ ಗಿರೀಶ್‌ಕುಮಾರ್ ಪ್ರಶಸ್ತಿ ಪ್ರದಾನ ಮಾಡಿದರು. ಸಂಸ್ಥೆಯ ಅಧ್ಯಕ್ಷ ಎಸ್. ಕುಮಾರಸ್ವಾಮಿ, ಸಂಸ್ಥೆಯ ಪದಾಧಿಕಾರಿಗಳಾದ ಎಲಿಝರ್ ಮಿಲ್ಟನ್, ಕೆ.ವಿ. ಭಾಸ್ಕರ್, ಅಭಿಲಾಶ್, ರಾಕೇಶ್ ಬಾಬು ಇನ್ನಿತರರಿದ್ದರು. ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಅವರು ಜಮ್ಮು-ಕಾಶ್ಮೀರದ ರಜೌರಿಯಲ್ಲಿ ಉಗ್ರರ ವಿರುದ್ಧ ಹೋರಾಟದ ಸಂದರ್ಭದಲ್ಲಿ ಹುತಾತ್ಮರಾಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net