ರ‌್ಯಾಗಿಂಗ್ ಕೇರಳ ಮೂಲದ 11 ವಿದ್ಯಾರ್ಥಿಗಳ ಬಂಧನ

Published on

ಮಂಗಳೂರು: ನಗರದ ಹೊರ ವಲಯದ ನರ್ಸಿಂಗ್ ಕಾಲೇಜೊಂದರ ವಿದ್ಯಾರ್ಥಿಗಳಿಗೆ ರ‌್ಯಾಗಿಂಗ್ ಮಾಡಿದ ಪ್ರಕರಣದಲ್ಲಿ ಕೇರಳ ಮೂಲದ 11 ಮಂದಿ ವಿದ್ಯಾರ್ಥಿಗಳನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
ಕೇರಳ ಮೂಲದ 5 ಮಂದಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರ‌್ಯಾಗಿಂಗ್ ಮಾಡಿದ್ದರು. ಈ ಬಗ್ಗೆ ಸಂತ್ರಸ್ತ ವಿದ್ಯಾರ್ಥಿಗಳು ಆಡಳಿತ ಮಂಡಳಿಯ ಗಮನಕ್ಕೆ ತಂದಿದ್ದರು. ಆಡಳಿತ ಮಂಡಳಿ ಒಟ್ಟು 19 ಮಂದಿ ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲಿಸಿದೆ. ಪೊಲೀಸರು ವಿಚಾರಣೆ ನಡೆಸಿದಾಗ 11 ಮಂದಿ ನೇರ ಆರೋಪಿಗಳಾಗಿದ್ದು, ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಶಶಿಕುಮಾರ್ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net