ಲಕ್ಷ್ಮೀಜನಾರ್ದನಸ್ವಾಮಿ ಬ್ರಹ್ಮರಥೋತ್ಸವ

IMG-20230406-WA0221
Published on

ಆಲೂರು: ಪಾಳೆಗಾರರು ಆಡಳಿತ ನಡೆಸಿದ ಕ್ಷೇತ್ರ ಎಂದೇ ಖ್ಯಾತಿ ಪಡೆದಿರುವ ಹಳೇಪಾಳ್ಯ ಗ್ರಾಮದ ಶ್ರೀಲಕ್ಷ್ಮೀ ಜನಾರ್ದನಸ್ವಾಮಿ ಬ್ರಹ್ಮರಥೋತ್ಸವ ಗುರುವಾರ ನೂರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ನೆರವೇರಿತು.

ತಾಲೂಕಿನ ಪಾಳ್ಯ ಹೋಬಳಿಯ ಹಳೇಪಾಳ್ಯ ಗ್ರಾಮದಲ್ಲಿರುವ ಶ್ರೀಲಕ್ಷ್ಮೀ ಜನಾರ್ದನ ಸ್ವಾಮಿ ದೇಗುಲದ ಪ್ರಧಾನ ಅರ್ಚಕ ವಿದ್ವಾನ್ ಎಚ್.ಎ.ಹರ್ಷ ಹಾಗೂ ಕೆ.ಹೊಸಕೋಟೆಯ ವಿಖಸಾನಾಚಾರ್ಯ ಅವರಿಂದ ನಾನಾ ಧಾರ್ಮಿಕ ಅನುಷ್ಠಾನಗಳು ನೆರವೇರಿದವು.

ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಹಾಗೂ ಅಧಿಕಾರಿಗಳು ಸೇರಿದಂತೆ ಜಿಲ್ಲೆಯ ನಾನಾ ಭಾಗಗಳಿಂದ ಆಗಮಿಸಿದ ಭಕ್ತಸಾಗರದ ನಡುವೆ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ನೆರೆದಿದ್ದ ಭಕ್ತರು ಹಣ್ಣು-ದವನ ಎಸೆದು ಭಕ್ತಿ ಮೆರೆದರು. ಮಧ್ಯಾಹ್ನ ಸಾವಿರಾರು ಭಕ್ತರು ಅನ್ನ ಪ್ರಸಾದ ಸ್ವೀಕರಿಸಿದರು.

ತಹಸೀಲ್ದಾರ್ ಮೋಹನ್ ಕುಮಾರ್, ಜಿಲ್ಲಾ ಎಪಿಎಂಸಿ ಮಾಜಿ ಅಧ್ಯಕ್ಷ ಕೆ.ಎಸ್.ಮಂಜೇಗೌಡ, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಸಿ.ವಿ.ಲಿಂಗರಾಜು, ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕ ಪಿ.ಎಲ್.ಲಿಂಗರಾಜ್, ಕರವೇ ಜಿಲ್ಲಾ ಕಾರ್ಯದರ್ಶಿ ರಘು ಪಾಳ್ಯ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಮುಖಂಡರು ಹಾಗೂ ದೇವಸ್ಥಾನ ಆಡಳಿತ ಮಂಡಳಿಯ ಪದಾಧಿಕಾರಿಗಳು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net