ಸಾಲಿಗ್ರಾಮ: ಸಾಲಬಾಧೆ ತಾಳಲಾರದೆ ರೈತರೊಬ್ಬರು ವಿಷದ ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸಾಲಿಗ್ರಾಮ ತಾಲೂಕು ಲಕ್ಷ್ಮೀಪುರ ಗ್ರಾಮದ ಗೋವಿಂದೇಗೌಡ(45) ಮೃತರು. ವ್ಯವಸಾಯಕ್ಕೆಂದು ಬಳ್ಳೂರು ಸಹಕಾರ ಸಂಘ, ಖಾಸಗಿ ಹಣಕಾಸು ಸಂಸ್ಥೆ ಹಾಗೂ ಕೈ ಸಾಲ ಸೇರಿದಂತೆ 15 ಲಕ್ಷ ರೂ.ಗೂ ಅಧಿಕ ಸಾಲ ಮಾಡಿದ್ದರು.
ಜಮೀನಿನಲ್ಲಿ ಬಳಿ ಕಾಳಿನ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಮುಂದಾಗಿದ್ದರು. ಕೂಡಲೇ ಮೈಸೂರಿನ ಕೆ.ಆರ್.ಅಸ್ವತ್ರೆಗೆ ದಾಖಲಿಸಿದರೂ ಪ್ರಯೋಜನವಾಗಲಿಲ್ಲ. ಮೃತರಿಗೆ ಪತ್ನಿ, ಪುತ್ರ, ಪುತ್ರಿ ಇದ್ದಾರೆ. ಸಾಲಿಗ್ರಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.