ಲಿಂಗಾಯತರನ್ನು ಒಬಿಸಿಗೆ ಸೇರಿಸುವ ಪ್ರಸ್ತಾಪಕ್ಕೆ ವರಿಷ್ಠರ ಬ್ರೇಕ್

Published on

ಬೆಂಗಳೂರು: ವೀರಶೈವ ಲಿಂಗಾಯತರನ್ಮು ಓಬಿಸಿಗೆ ಸೇರಿಸುವ ಬಗ್ಗೆ ಇಂದು ಯಾವುದೇ ತೀರ್ಮಾನ ಮಾಡಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಶುಕ್ರವಾರದ ಸಂಪುಟ ಸಭೆಯಲ್ಲಿ ಇದೇ ವಿಚಾರ ಪ್ರಮುಖವಾಗಿತ್ತು. ಈ ನಿರ್ಣಯ ಮಾಡುವುದಕ್ಕಾಗಿಯೇ ಸಂಪುಟ ಸಭೆ ಕರೆಯಲಾಗಿತ್ತು. ಆದರೆ ಕೇಂದ್ರ ನಾಯಕರು ತೀರ್ಮಾನ‌ಕೈಗೊಳ್ಳುವುದಕ್ಕೆ ತಡೆ ಹಾಕಿದ್ದಾರೆ ಎನ್ನಾಗಿದೆ.
ಮಹತ್ವದ ಕಾರಣಕ್ಕೆ ಲಿಂಗಾಯತರ ಬಗ್ಗೆ ಓಬಿಸಿಗೆ ಸೇರಿಸಲು ನಿರ್ಧರಿಸಿದ್ದೆವು. ಆದರೆ, ದೆಹಲಿಗೆ ಹೋಗಿ ಚರ್ಚಿಸಿದ ಬಳಿಕ ಅದರ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಬಿಎಸ್ ವೈ ತಿಳಿಸಿದರು.

ಯಾವುದೇ ಆತುರದ ತೀರ್ಮಾನ ಕೈಗೊಳ್ಳದಂತೆ ಸಂಪುಟ ಸಹೋದ್ಯೋಗಿಗಳು ಸಲಹೆ ಮಾಡಿದ್ದಾರೆ. ಹಾಗಾಗಿ ದೆಹಲಿಗೆ ಹೋಗಿ ಬಂದ ಬಳಿಕವಷ್ಟೇ ಅಂತಿಮ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net