

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಮಲತಂದೆಗೆ ಮೈಸೂರಿನ ಪೋಕ್ಸೋ ವಿಶೇಷ ನ್ಯಾಯಾಲಯ 20 ವರ್ಷ ಕಾರಾಗೃಹ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಆರೋಪಿಯು 2023ರ ನವೆಂಬರ್ 11ರ ರಾತ್ರಿ ಬಾಲಕಿಯನ್ನು ಪಕ್ಕದಲ್ಲಿ ಮಲಗಿಸಿಕೊಂಡು ದೌರ್ಜನ್ಯ ನಡೆಸಿದ್ದ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ವಿಜಯನಗರ ಪೊಲೀಸ್ ಠಾಣೆ ಸರ್ಕಲ್ ಇನ್‌ಸ್ಪೆಕ್ಟರ್ ಸುರೇಶ್ ಕುಮಾರ್ ತನಿಖೆ ನಡೆಸಿ, ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ನ್ಯಾಯಾಧೀಶ ಆನಂದ್ ಪಿ. ಹೂಗಾಡೆ ವಿಚಾರಣೆ ನಡೆಸಿದರು. ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷ ಶಿಕ್ಷೆಯೊಂದಿಗೆ 60 ಸಾವಿರ ರೂ. ದಂಡ ವಿಧಿಸಿದ್ದಾರೆ. ಜತೆಗೆ ಸಂತ್ರಸ್ತೆ ಕಾನೂನು ಪ್ರಾಧಿಕಾರದಿಂದ 6 ಲಕ್ಷ ರೂ. ಪರಿಹಾರಕ್ಕೆ ಅರ್ಹಳು ಎಂದು ಆದೇಶಿಸಿದ್ದಾರೆ. ಸರ್ಕಾರಿ ಅಭಿಯೋಜಕಿ ಕೆ.ಬಿ.ಜಯಂತಿ ವಾದ ಮಂಡಿಸಿದ್ದರು.