ಲೋಕಾಯುಕ್ತ ಅಧಿಕಾರಿಗಳ ವಿರುದ್ಧ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ದೂರು

MUDA Mysuru
Published on

ಮೈಸೂರು:  ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳ ವಿರುದ್ಧ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಕೇಂದ್ರ ಜಾಗೃತಿ ಆಯೋಗಕ್ಕೆ ದೂರು ನೀಡಿದ್ದಾರೆ.

ಐಪಿಎಸ್ ಅಧಿಕಾರಿಗಳಾದ ಲೋಕಾಯುಕ್ತ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಮನೀಶ್ ಕರ್ಬೀಕರ್, ಪೊಲೀಸ್ ಮಹಾನಿರೀಕ್ಷಕ ಸುಬ್ರಹ್ಮಣ್ಯೇಶ್ವರ ರಾವ್, ಮೈಸೂರು ಲೋಕಾಯುಕ್ತ ಎಸ್.ಪಿ.ಟಿ.ಜೆ.ಉದೇಶ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಇತರರ ವಿರುದ್ಧದ ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಸುಳ್ಳು ತನಿಖಾ ವರದಿ ಸಲ್ಲಿಸಿದ್ದು, ಅವರ ವಿರುದ್ಧ

ಕ್ರಮ ಕೈಗೊಳ್ಳಬೇಕುಎಂದು ಕೋರಿ ಕೇಂದ್ರ ಜಾಗೃತಿ ಆಯೋಗದ ಆಯುಕ್ತರಿಗೆ ಅಂಚೆ ಮೂಲಕ ದೂರು ಸಲ್ಲಿಸಿದ್ದಾರೆ.

ಈ ಮೂವರು ಅಧಿಕಾರಿಗಳು ಮುಡಾ ಹಗರಣದ ತನಿಖೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪ್ರಭಾವಕ್ಕೆ ಒಳಗಾಗಿ ಅಧಿಕಾರ ಚಲಾಯಿಸಿದ್ದಾರೆ. ಪ್ರಕರಣ ಸಂಬಂಧ ಸೂಕ್ತ ಸಾಕ್ಷ್ಯಾಧಾರ ನೀಡಿದ್ದರೂ ಮಧ್ಯಂತರ ವರದಿಯನ್ನು ಅಂತಿಮ ವರದಿಯಂತೆ ಸುಳ್ಳು ವರದಿಯನ್ನು ನೀಡಿದ್ದಾರೆ, ಸಿಎಂ ಅವರ ಪ್ರಭಾವದಿಂದ ಅಕ್ರಮ ವೇಸಗಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net