

ಚಿತ್ರದುರ್ಗ: ರಾಜ್ಯಲೋಕೋಪಯೋಗಿ ಇಲಾಖೆ ನೌಕರರ ಸಂಘದ ಜಿಲ್ಲಾಧ್ಯಕ್ಷರಾಗಿ ಚಿತ್ರದುರ್ಗ ಲೋಕೋಪಯೋಗಿ ವಿಭಾಗದ ಪ್ರಥಮ ದರ್ಜೆ ಸಹಾಯಕ ಎ. ಹಸೇನ್, ಕಾರ್ಯದರ್ಶಿಯಾಗಿ ದ್ವಿತೀಯ ದರ್ಜೆ ಸಹಾಯಕ ಆರ್. ರಾಜೇಶ್ ಅವಿರೋಧ ಆಯ್ಕೆಯಾಗಿದ್ದಾರೆ. ಇಲಾಖೆ ನೌಕರರ ಸಂಘದ ರಾಜ್ಯಾಧ್ಯಕ್ಷ ಡಾ.ಎ. ಸೋಮಶೇಖರ್ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ಸಭೆಯಲ್ಲಿ ಈ ಆಯ್ಕೆ ನಡೆಯಿತು. ರಾಜ್ಯಲೋಕೋಪಯೋಗಿ ಇಲಾಖೆ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಎಸ್. ಶ್ರೀನಿವಾಸ, ಖಜಾಂಚಿ ಎಸ್.ವಿ. ಶ್ರೀನಿವಾಸ್, ಉಪಾಧ್ಯಕ್ಷೆ ಸಿ.ಎಸ್. ಸುಮಾ ಇತರರು ಇದ್ದರು.