ಚಾಮರಾಜನಗರ: ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳಿಗೂ ಲ್ಯಾಪ್ ಟಾಪ್ ವಿತರಣೆ ಮಾಡಬೇಕೆಂದು ಒತ್ತಾಯಿಸಿ ನಗರದಲ್ಲಿ ಬುಧವಾರ ಎಐಡಿಎಸ್ಒ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿ ಜಮಾಯಿಸಿದ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಲ್ಯಾಪ್ ಪಾಟ್ ವಿತರಣೆಯಾಗಬೇಕೆಂದು ಆಗ್ರಹಿಸಿ ಘೋಷಣೆ ಮೊಳಗಿಸಿದರು.
ರಾಜ್ಯ ಸರ್ಕಾರ ಪದವಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ನೀಡುವ ಯೋಜನೆ ಘೋಷಿಸಿರುವುದು ಶ್ಲಾಘನೀಯ. ಪದವಿ ವಿದ್ಯಾರ್ಥಿಗಳಂತೆ ರಾಜ್ಯದ 12 ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಬಡ ವಿದ್ಯಾರ್ಥಿಗಳಿಗೂ ಲ್ಯಾಪ್‌ಟಾಪ್ ನೀಡಿದರೆ ಅನುಕೂಲವಾಗಲಿದೆ. ತಾಂತ್ರಿಕ ಶಿಕ್ಷಣದ ವಿದ್ಯಾರ್ಥಿಗಳು ಲ್ಯಾಪ್‌ಟಾಪ್ ಮೂಲಕ ತಮ್ಮ ಪಠ್ಯದ ನೇಮಕ ಭಾಗಗಳನ್ನು ಪೂರೈಸಿಕೊಳ್ಳಲು ಸಾಧ್ಯವಾಗಲಿದೆ ಎಂದು ಎಡಿಸಿ ಆನಂದ್ ಅವರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಆಸಿಯಾ ಬೇಗಂ, ಚಂದ್ರಕಲಾ, ರಾಜೇಂದ್ರ, ರಘು, ಲಿಖಿತಾ, ನಿರಂಜನ, ಮಹಂತೇಶ್ ಇತರರಿದ್ದರು.