ಚಿತ್ರದುರ್ಗ:ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ವಲಸೆ ಕುರಿಗಾರರಿಗೆ ಗುರುತಿನ ಚೀಟಿ ವಿತರಿಸಲು ಸೆ.30ರೊಳಗೆ ಅ ರ್ಜಿ ಆಹ್ವಾನಿಸಿದೆ. ಜಿಲ್ಲೆಯಲ್ಲಿ 20ಕ್ಕೂ ಹೆಚ್ಚು ಕುರಿ,ಮೇಕೆಗಳನ್ನು ಹೊಂದಿರುವ ಅರ್ಹ ವಲಸೆ ಕುರಿಗಾಹಿಗಳು ತಮ್ಮ ತಾಲೂಕಿನ ಪಶು ಆಸ್ಪತ್ರೆ ಮುಖ್ಯ ಪಶು ವೈದ್ಯಾಧಿಕಾರಿಗಳಿಂದ ಅರ್ಜಿಪಡೆದು,ಗ್ರಾಮಲೆಕ್ಕಾಧಿಕಾರಿಗಳ ಪ್ರಮಾಣಪತ್ರ ಸಹಿತ ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕೆಂದು ಪ್ರಕಟಣೆ ತಿಳಿಸಿದೆ.