ವಾಲ್ಮೀಕಿ ಭವನಕ್ಕೆ 2 ಕೋಟಿ ಅನುದಾನ ಬಿಡುಗಡೆ

11HDK 02
ಎಚ್.ಡಿ.ಕೋಟೆ ಪಟ್ಟಣದಲ್ಲಿ ವಾಲ್ಮೀಕಿ ಸಮುದಾಯ ಭವನದ ಕಾಮಗಾರಿ ಸ್ಥಳಕ್ಕೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಬಿ.ನಾಗೇಂದ್ರ ಅವರು ಭೇಟಿ ನೀಡಿದ ಸಂದರ್ಭದಲ್ಲಿ ಮುಖಂಡರು ಸನ್ಮಾನಿಸಿದರು. ಅನಿಲ್ ಚಿಕ್ಕಮಾದು, ಚಿಕ್ಕವೀರನಾಯಕ, ಕ್ಯಾತನಹಳ್ಳಿ ನಾಗರಾಜು ಇತರರು ಇದ್ದರು.
Published on

ಎಚ್.ಡಿ.ಕೋಟೆ: ಪಟ್ಟಣದ ಗದ್ದಿಗೆ ವೃತ್ತದಲ್ಲಿರುವ ಮಹರ್ಷಿ ವಾಲ್ಮೀಕಿ ಸಮುದಾಯ ಭವನದ ಮುಂದುವರಿದ ಕಾಮಗಾರಿಗೆ ಸರ್ಕಾರದಿಂದ 2 ಕೋಟಿ ರೂ.ಅನುದಾನ ಬಿಡುಗಡೆ ಮಾಡಿಸುವುದಾಗಿ ಪರಿಶಿಷ್ಟ ವರ್ಗಗಳ ಕಲ್ಯಾಣ ಮತ್ತು ಸಬಲೀಕರಣ ಹಾಗೂ ಕ್ರೀಡಾ ಸಚಿವ ಬಿ. ನಾಗೇಂದ್ರ ಭರವಸೆ ನೀಡಿದರು.

ಪಟ್ಟಣದ ವಾಲ್ಮೀಕಿ ಸಮುದಾಯ ಭವನಕ್ಕೆ ಗುರುವಾರ ಭೇಟಿ ನೀಡಿ ಕಾಮಗಾರಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಭವನ ಕಾಮಗಾರಿ ಪೂರ್ಣಗೊಳ್ಳಲು ಇನ್ನೂ ಎರಡು ಕೋಟಿ ರೂ. ಅನುದಾನ ಬೇಕಿದೆ. ತಕ್ಷಣಕ್ಕೆ ಮುಖ್ಯಮಂತ್ರಿ ಜತೆ ಮಾತನಾಡಿ ಒಂದು ಕೋಟಿ ರೂ. ಬಿಡುಗಡೆ ಮಾಡಿಸಲಾಗುವುದು. ಕೊನೆ ಹಂತದಲ್ಲಿ ಇನ್ನೂ ಒಂದು ಕೋಟಿ ರೂ. ಕೊಡಿಸುವುದಾಗಿ ಭರವಸೆ ನೀಡಿದರು.

ಭವನವನ್ನು ಅದಷ್ಟು ಬೇಗ ಪೂರ್ಣಗೊಳಿಸಿ ಉದ್ಘಾಟನೆಗೆ ರಾಜನಹಳ್ಳಿ ಮಠದ ಪ್ರಸನ್ನಾನಂದಪುರಿ ಸ್ವಾಮೀಜಿ, ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಮಾಜ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಾದೇವಪ್ಪ ಇತರ ಪ್ರಮುಖರನ್ನು ಆಹ್ವಾನಿಸಿ, ಶಾಸಕ ಅನಿಲ್ ಚಿಕ್ಕಮಾದು ಅವರ ಅಧ್ಯಕ್ಷತೆಯಲ್ಲಿ ಉದ್ಘಾಟನೆ ಮಾಡೋಣ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಶಾಸಕ ಅನಿಲ್ ಚಿಕ್ಕಮಾದು, ಜಿಪಂ ಮಾಜಿ ಸದಸ್ಯ ಚಿಕ್ಕವೀರನಾಯಕ, ತಾಲೂಕು ನಾಯಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಕ್ಯಾತನಹಳ್ಳಿ ನಾಗರಾಜು, ತಾಲೂಕು ನಾಯಕರ ಸಂಘದ ಮಾಜಿ ಅಧ್ಯಕ್ಷ ಶಂಭುಲಿಂಗ ನಾಯಕ, ಎಸ್.ಚಿಕ್ಕಮಾದು ಅಭಿಮಾನಿ ಬಳಗದ ಅಧ್ಯಕ್ಷ ಜಿನ್ನಹಳ್ಳಿ ರಾಜನಾಯಕ, ಮುಖಂಡರಾದ ಪುರದಕಟ್ಟೆ ಬಸವರಾಜು, ತುಂಬಸೋಗೆ ನಾಗರಾಜು, ಮಣಿ, ಗೋವಿಂದನಾಯಕ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net